Shukra Gochar 2024: ತಿಂಗಳಾಂತ್ಯದಲ್ಲಿ ಶುಕ್ರ ಸಂಚಾರ, ಮೂರು ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ಬಂಪರ್

Tue, 26 Mar 2024-4:55 pm,

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ 31 ರಂದು ಬೆಳಿಗ್ಗೆ 09:30 ಕ್ಕೆ ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ.

ಶುಕ್ರ ರಾಶಿ ಪರಿವರ್ತನೆಯ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಶುಕ್ರ ಸಂಕ್ರಮನದಿಂದ ಮೂರು ರಾಶಿಯವರಿಗೆ ವಿಶೇಷ ಪ್ರಯೋಜನ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.... 

ಶುಕ್ರ ರಾಶಿ ಪರಿವರ್ತನೆಯು ಮೇಷ ರಾಶಿಯ ಜನರಿಗೆ ವಿಶೇಷ ಪ್ರಯೋಜನವನ್ನು ನೀಡಲಿದೆ. ಈ ಸಮಯದಲ್ಲಿ ಹಣಕಾಸಿನ ಲಾಭ ಚೆನ್ನಾಗಿದೆ. ಇದು ನಿಮ್ಮ ವಿಶ್ವಾಸವನ್ನು ಕೂಡ ಹೆಚ್ಚಿಸಲಿದೆ. 

ಶುಕ್ರ ಸಂಚಾರವು ಮಿಥುನ ರಾಶಿ ಜನರಿಗೂ ಕೂಡ್ ವಿಶೇಷ ಪ್ರಯೋಜನಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಅದೃಷ್ಟ ಬದಲಾಗಲಿದ್ದು, ಉದ್ಯೋಗದಲ್ಲಿ ಭಾರೀ ಯಶಸ್ಸನ್ನು ಪಡೆಯುವ ಸಾಧ್ಯತೆ ಇದೆ. 

ಶುಕ್ರ ರಾಶಿ ಬದಲಾವಣೆಯು ಕನ್ಯಾ ರಾಶಿಯ ಜನರಿಗೆ ಕೂಡ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು, ವ್ಯಾಪಾರ-ವ್ಯವಹಾರದಲ್ಲಿಯೂ ಬಂಪರ್ ಲಾಭವನ್ನು ಗಳಿಸುವಿರಿ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link