Shukra Gochar: ಮೇ ತಿಂಗಳಿನಲ್ಲಿ ಈ ರಾಶಿಯವರಿಗೆ ತುಂಬಾ ಎಚ್ಚರಿಕೆ ಅಗತ್ಯ
ಶುಕ್ರನನ್ನು ಶುಭ ಗ್ರಹ ಎಂದು ಪರಿಗಣಿಸಲಾಗುತ್ತದೆ. ಆದರೂ, ವ್ಯಕ್ತಿಯ ಜಾತಕದಲ್ಲಿ ಶುಕ್ರನು ಅಶುಭ ಸ್ಥಾನದಲ್ಲಿದ್ದರೆ ಅಮಂಗಳಕರ ಫಲಗಳನ್ನೇ ನೀಡುತ್ತಾನೆ. ಇದೀಗ 02 ಮೇ 2023ರಂದು ಶುಕ್ರ ರಾಶಿ ಪರಿವರ್ತನೆ ಹೊಂದಿ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಸಂದರ್ಭದಲ್ಲಿ ಕೆಲವು ರಾಶಿಯವರ ಜೀವನದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದ್ದಾನೆ. ಮಿಥುನ ರಾಶಿಗೆ ಶುಕ್ರನ ಪ್ರವೇಶದ ಬಳಿಕ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ತಿಳಿಯಿರಿ.
ಶುಕ್ರನ ರಾಶಿ ಪರಿವರ್ತನೆಯು ವೃಷಭ ರಾಶಿಯವರ ಆತ್ಮ ವಿಶ್ವಾಸವನ್ನು ಕುಗ್ಗಿಸಬಹುದು. ಈ ಸಮಯದಲ್ಲಿ ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗಲಿದೆ. ಇದರಿಂದ ನಿಮ್ಮ ಆರೋಗ್ಯವೂ ಹದಗೆಡಬಹುದು. ದುಂದು ವೆಚ್ಚಕ್ಕೆ ಕಡಿವಾಣ ಹಾಕದಿದ್ದರೆ ಭವಿಷ್ಯದಲ್ಲಿ ಭಾರೀ ಆರ್ಥಿಕ ಸಮಸ್ಯೆಗಳು ಎದುರಾಗಬಹುದು, ಎಚ್ಚರದಿಂದಿರಿ.
ಸಿಂಹ ರಾಶಿಯವರಿಗೆ ಶುಕ್ರನ ಸಂಚಾರದಿಂದ ಉದ್ಯೋಗ ಬದಲಾವಣೆ ಸಾಧ್ಯತೆ ಇದೆ. ಈ ಸಮಯದಲ್ಲಿ ನೀವು ನಿಮ್ಮ ಪಿತೃ ಸಮಾನರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದಾಗ್ಯೂ, ನಿಮ್ಮ ಕೋಪಕ್ಕೆ ಕಡಿವಾಣ ಹಾಕದಿದ್ದರೆ ಸಮಸ್ಯೆಗಳು ಇನ್ನೂ ಬಿಗಡಾಯಿಸಬಹುದು.
ಮೇ ತಿಂಗಳಿನಲ್ಲಿ ಮಿಥುನ ರಾಶಿಗೆ ಶುಕ್ರನ ಸಂಚಾರವು ವೃಶ್ಚಿಕ ರಾಶಿಯವರಿಗೂ ಕೂಡ ಅಷ್ಟು ಶುಭ ಎಂದು ಹೇಳಲಾಗುವುದಿಲ್ಲ. ಈ ಸಮಯದಲ್ಲಿ ನೀವು ನಿಮ್ಮ ಮಾತಿನ ಮೇಲೆ ಸಂಯಮವನ್ನು ಕಾಯ್ದುಕೊಳ್ಳುವುದು ತುಂಬಾ ಅಗತ್ಯ. ನಿರೀಕ್ಷಿತ ಫಲಿತಾಂಶಗಳಿಗಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿ. ಖಂಡಿತ ನಿಮ್ಮ ಶ್ರಮ ವ್ಯರ್ಥವಾಗುವುದಿಲ್ಲ.
ಶುಕ್ರ ರಾಶಿ ಪರಿವರ್ತನೆ ಮಕರ ರಾಶಿಯವರಿಗೂ ಕೂಡ ಮಂಗಳಕರವಾಗಿಲ್ಲ. ಈ ಸಮಯದಲ್ಲಿ ಆತ್ಮವಿಶ್ವಾಸದಿಂದಿರಿ. ಆದರೆ, ಅತಿಯಾದ ಆತ್ಮವಿಶ್ವಾಸವು ನಿಮ್ಮ ಕೆಲಸಕ್ಕೆ ಧಕ್ಕೆ ತರಬಹುದು. ನಿಮ್ಮ್ ಪೋಷಕರ ಆರೋಗ್ಯದ ವಿಷಯದಲ್ಲಿ ಹೆಚ್ಚು ಹಣ ಖರ್ಚಾಗಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.