ನವೆಂಬರ್ ಆರಂಭದಿಂದ ಈ ಜನರ ಜೀವನದಲ್ಲಿ ಶುಕ್ರ ಪರ್ವ, ಧನಲಕ್ಷ್ಮಿಯ ಕೃಪೆಯಿಂದ ಅಪಾರ ಕನಕವೃಷ್ಟಿ!
Malavya Rajyog 2023 : ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ವೈಭವ-ಧನ-ಸಂಪತ್ತಿನ ಕಾರಕ ಗ್ರಹ ಎಂದು ಪರಿಗಣಿಸಲಾಗಿದೆ. ಶೀಘ್ರದಲ್ಲಿಯೇ ಶುಕ್ರ ತನ್ನ ಸ್ವ ರಾಶಿಯಾಗಿರುವ ತುಲಾ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಮಾಲವ್ಯ ರಾಜಯೋಗ ರಚನೆಯಾಗಲಿದೆ. (Spiritual News In Kannada)
ವೃಷಭ ರಾಶಿ: ಹಾಗೆ ನೋಡಿದರೆ ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರ ತುಲಾ ರಾಶಿಗೆ ಅಧಿಪತಿಯಾಗುವುದರ ಜೊತೆಗೆ ನಿಮ್ಮ ರಾಶಿಯ ಅಧಿಪತಿಯೂ ಆಗಿದ್ದಾನೆ. ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಆರನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ಅಷ್ಟೇ ಅಲ್ಲ ನಿಮಗೆ ಆಕಸ್ಮಿಕ ಧನಪ್ರಾಪ್ತಿ ಕೂಡ ಆಗಲಿದೆ. ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ, ವ್ಯಾಪಾರದಲ್ಲಿ ಬಾಳಸಂಗಾತಿಯ ಸಲಹೆಯಿಂದ ಮಾಡುವ ನಿಮ್ಮ ಎಲ್ಲಾ ಕೆಲಸಗಳು ಯಶಸ್ವಿಯಾಗಲಿವೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ನಿಮಗೆ ಅಪಾರ ಯಶಸ್ಸು ಸಿಗಲಿದೆ. ಪಾಟ್ನರ್ಶಿಪ್ ಕೆಲಸದಲ್ಲಿ ನಿಮಗೆ ಉತ್ತಮ ಲಾಭ ಸಿಗಲಿದೆ.
ಮಕರ ರಾಶಿ: ಮಾಲವ್ಯ ರಾಜಯೋಗದ ರಚನೆ ನಿಮ್ಮ ವೃತ್ತಿ ಹಾಗೂ ವ್ಯಾಪಾರದ ದೃಷ್ಟಿಕೊನದಿಂದ ಸಾಕಷ್ಟು ಲಾಭದಾಯಕವಾಗಿದೆ. ಏಕೆಂದರೆ ಶುಕ್ರ ಈ ಅವಧಿಯಲ್ಲಿ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಆದಾಯದ ಮೂಲಗಳು ಹೆಚ್ಚಾಗಲಿವೆ ಮತ್ತು ನಿಮಗೆ ಉತ್ತಮ ಆರ್ಥಿಕ ಲಾಭ ಉಂಟಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಯೋಗಗಳು ಕೂಡ ನಿರ್ಮಾಣಗೊಳ್ಳುತ್ತಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹಿರಿಯರ-ಕಿರಿಯರ ಬೆಂಬಲ ಸಿಗಲಿದೆ.
ಕುಂಭ ರಾಶಿ: ಮಾಲವ್ಯ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ. ಅವುಗಳಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ನೌಕರಿಯಲ್ಲಿ ಮನಸ್ಸಿಗೆ ಮುದ ನೀಡುವ ಫಲಿತಾಂಶಗಳು ಸಿಗಳಿವೆ. ವ್ಯಾಪಾರದಲ್ಲಿ ದೊಡ್ಡ ಮಟ್ಟದಲ್ಲಿ ಹಣ ಬಂದು ನಿಮ್ಮ ಕೈಸೇರುವುದರಿಂದ ನಿಮಗೆ ಸಂತೋಷ ಸಿಗಲಿದೆ. ವೈವಾಹಿಕ ಜೀವನ ಪ್ರೇಮ ಸಂಬಂಧಗಳಲ್ಲಿ ಸುಮಧುರತೆ ಇರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯ ಅತ್ಯಂತ ಅದ್ಭುತವಾಗಿರಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)