ಬೇಸಿಗೆಯಲ್ಲಿ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು 5 ಸಿಂಪಲ್ ಟಿಪ್ಸ್

Weight lose in summer: ಆರೋಗ್ಯ ತಜ್ಞರ ಪ್ರಕಾರ, ಬೇರೆ ಋತುಗಳಿಗಿಂತ ಬೇಸಿಗೆ ಕಾಲದಲ್ಲಿ ಬಹಳ ಬೇಗ ತೂಕ ಇಳಿಸಿಕೊಳ್ಳಬಹುದು. ಅದಕ್ಕಾಗಿ ಇಲ್ಲಿದೆ ಐದು ಸರಳ ಸಲಹೆ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಬೇರೆಲ್ಲಾ ಋತುಗಳಿಗಿಂತ ಬೇಸಿಗೆ ಕಾಲ ಅತ್ಯುತ್ತಮ ಋತು ಎಂದು ಹೇಳಬಹುದು. ಆರೋಗ್ಯ ತಜ್ಞರ ಪ್ರಕಾರ, ಈ ಋತುವಿನಲ್ಲಿ ನೀವು ಕೆಲವು ಸರಳ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. 

2 /6

ಬೇಸಿಗೆಯಲ್ಲಿ ಹೆಚ್ಚಾಗಿ ಬೆವರುವುದರಿಂದ ಸಾಕಷ್ಟು ಪ್ರಮಾಣದ  ನೀರು ಕುಡಿಯುವುದು ಅವಶ್ಯಕ. ಇದರೊಂದಿಗೆ ಎಳನೀರು, ನಿಂಬೆಹಣ್ಣಿನ ಪಾನಕ ತಯಾರಿಸಿ ಸೇವಿಸುವುದು ನಿಮಗೆ ತೂಕ ಕಳೆದುಕೊಳ್ಳಲು ಸಹಕಾರಿ ಆಗಬಹುದು. 

3 /6

ಬೇಸಿಗೆ ಕಾಲದಲ್ಲಿ ವಾಕಿಂಗ್, ವ್ಯಾಯಾಮ, ಸ್ವಿಮ್ಮಿಂಗ್, ಸೈಕ್ಲಿಂಗ್ ನಂತಹ ಚಟುವಟಿಕೆಗಳಲ್ಲಿ ತೊಡಗುವುದರಿಂದ ಸಾಮಾನ್ಯಕ್ಕಿಂತ ಹೆಚ್ಚಿನ ವೇಗದಲ್ಲಿ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. 

4 /6

ಬೇಸಿಗೆಯಲ್ಲಿ ಅತಿಯಾದ ಉಷ್ಣತೆ, ಶಾಖದಿಂದ ಪರಿಹಾರ ಪಡೆಯಲು ಜ್ಯೂಸ್‌ಗಳನ್ನು ಕುಡಿಯುವುದು ತುಂಬಾ ಪ್ರಯೋಜ್ನಕಾರಿ. ಋತುಮಾನದ ಹಣ್ಣುಗಳನ್ನು ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಆರೋಗ್ಯಕರವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. 

5 /6

ಬೇಸಿಗೆಯಲ್ಲಿ ಬೇರೆ ಕರಿದ ಆಹಾರಗಳ ಬದಲಿಗೆ ನಿಮ್ಮ ಡಯಟ್ನಲ್ಲಿ ಸೂಪ್‌ಗಳು ಸೇರಿಸುವುದು ಉತ್ತಮ ಆಯ್ಕೆ. ಇದು ಆರೋಗ್ಯ ವೃದ್ಧಿಯ ಜೊತೆಗೆ ತೂಕ ಇಳಿಸಿಕೊಳ್ಳಲು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. 

6 /6

ಸಾಮಾನ್ಯವಾಗಿ ಬೇಸಿಗೆಯಲ್ಲಿ ಕೆಲವರು ಊಟ ಸೇರುವುದಿಲ್ಲ ಎಂದು ಹೆಚ್ಚಾಗಿ ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇದರೊಂದಿಗೆ ಜಂಕ್ ಫುಡ್‌ಗಳನ್ನು ಸೇವಿಸುತ್ತಾರೆ. ಆದರೆ, ಬೇಸಿಗೆ ಕಾಲದಲ್ಲಿ ತಾಜಾ ಹಣ್ಣು, ತರಕಾರಿಗಳ ಸೇವನೆಯು ನಿಮ್ಮ ತೂಕ ಇಳಿಕೆಗೆ ಉತ್ತಮ ಕೊಡುಗೆ ನೀಡಬಲ್ಲವು.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.