ಈ ಒಣಹಣ್ಣಷ್ಟೇ ಸಾಕು: ಬೆಳಗೆದ್ದು ಹಳಸಿದ ಬಾಯಲ್ಲಿ ತಿಂದರೆ ಸೊಂಟದ ಸುತ್ತ ಸಂಗ್ರಹವಾದ ಕೆಟ್ಟ ಬೊಜ್ಜು ಸುಲಭವಾಗಿ ಕರಗುತ್ತೆ! ಯಾವ ಶ್ರಮವೂ ಬೇಕಿಲ್ಲ
ಅನೇಕ ರೀತಿಯ ಪ್ರೋಟೀನ್ಗಳು, ವಿಟಮಿನ್ಗಳು, ಖನಿಜಗಳು ಮತ್ತು ಫೈಬರ್ ಒಣ ಹಣ್ಣುಗಳಲ್ಲಿ ಕಂಡುಬರುತ್ತವೆ. ಇದು ನಿಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಂದಹಾಗೆ ತೂಕ ಇಳಿಸಿಕೊಳ್ಳಲು ಒಣ ಹಣ್ಣುಗಳನ್ನು ತುಂಬಾ ಸಹಾಯಕ.
ತೂಕ ಕಳೆದುಕೊಳ್ಳಲು ಒಣದ್ರಾಕ್ಷಿಗಳನ್ನು ಸೇವಿಸಬಹುದು. ನೆನೆಸಿದ ಒಣದ್ರಾಕ್ಷಿಯನ್ನು ಬೆಳಗ್ಗೆ ಎದ್ದಂತೇ ಬ್ರಷ್ ಮಾಡುವ ಮುನ್ನ ಸೇವಿಸಬೇಕು. ಇದು ಹೆಚ್ಚಿನ ಪ್ರಮಾಣದ ಫೈಬರ್, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಪ್ರೋಟೀನ್ ಅನ್ನು ಹೊಂದಿರುತ್ತದೆ ಹೀಗಾಗಿ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಅಂಜೂರದಲ್ಲಿ ಫೈಬರ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಹೀಗಾಗಿ ಹೊಟ್ಟೆ ದೀರ್ಘಕಾಲದವರೆಗೆ ತುಂಬಿದ ಅನುಭವ ನೀಡುತ್ತದೆ. ಇದಲ್ಲದೆ, ಒಮೆಗಾ -3 ಕೊಬ್ಬಿನಾಮ್ಲಗಳು ಅಂಜೂರದಲ್ಲಿ ಕಂಡುಬರುತ್ತವೆ. ಇದು ಕ್ಯಾಲೊರಿಗಳನ್ನು ಸುಡುವಲ್ಲಿ ಸಹಾಯ ಮಾಡುತ್ತದೆ.
ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರಿಗೆ ಬಾದಾಮಿ ತುಂಬಾ ಪ್ರಯೋಜನಕಾರಿ. ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಇದರಷ್ಟು ಸಹಾಯಕ ಮತ್ತೊಂದಿಲ್ಲ. ಮೊನೊಸಾಚುರೇಟೆಡ್ ಕೊಬ್ಬು, ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಪ್ರೋಟೀನ್‌ನಂತಹ ಅಂಶಗಳು ಬಾದಾಮಿಯಲ್ಲಿ ಕಂಡುಬರುತ್ತವೆ.
ಖರ್ಜೂರದಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಕಂಡುಬರುತ್ತದೆ. ಇದರಿಂದಾಗಿ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಇದಲ್ಲದೆ, ಖರ್ಜೂರವು ವಿಟಮಿನ್ ಬಿ 5 ಅನ್ನು ಹೊಂದಿದ್ದು, ಇದು ತ್ರಾಣವನ್ನು ಹೆಚ್ಚಿಸುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.