ಖಾಲಿ ಹೊಟ್ಟೆಯಲ್ಲಿ ವಾಲ್ ನಟ್ಸ್ ತಿಂದರೆ ಈ ಕಾಯಿಲೆಗಳಿಂದ ದೂರವಿರಬಹುದು!
ವಾಲ್‌ನಟ್ಸ್ ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ವಾಲ್‌ನಟ್ಸ್ ನ್ನು ರಾತ್ರಿ ನೆನೆಸಿ ಬೆಳಗ್ಗೆ ಸೇವಿಸುವುದರಿಂದ ಆರೋಗ್ಯಕ್ಕೆ ಹಲವಾರು ಲಾಭಗಳಿವೆ.
ವಾಲ್‌ನಟ್ಸ್ ಒಮೆಗಾ 3 ಕೊಬ್ಬಿನಾಮ್ಲಗಳು, ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿದೆ. ಡ್ರೈ ಫ್ರೂಟ್ಸ್ ತಿಂದರೆ ನಮ್ಮ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ.
ಮಧುಮೇಹದಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ವಾಲ್‌ನಟ್ಸ್ ಅನ್ನು ಸೇರಿಸಬೇಕು. ಇದು ರಕ್ತದಲ್ಲಿನ ಸಕ್ಕರೆಯ ಹಠಾತ್ ಏರಿಕೆಯನ್ನು ತಡೆಯುತ್ತದೆ. ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚಿನ ಆರೋಗ್ಯ ಲಾಭಗಳು ಸಿಗುತ್ತವೆ.
ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ವಾಲ್‌ನಟ್ಸ್ ಸೇವಿಸಲು ಆರಂಭಿಸಿ. ಇದರಿಂದ ಒಳ್ಳೆಯ ನಿದ್ದೆ ಬರುತ್ತದೆ. ನಿದ್ರಾಹೀನತೆಯು ಸಾಮಾನ್ಯವಾಗಿ ರೋಗಿಗಳಲ್ಲಿ ಖಿನ್ನತೆಗೆ ಕಾರಣವಾಗುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ವಾಲ್‌ನಟ್ಸ್ ತಿನ್ನಲು ಪ್ರಾರಂಭಿಸಿ.
ವಾಲ್‌ನಟ್ಸ್ ಫೈಬರ್ ನಲ್ಲಿ ಸಮೃದ್ಧವಾಗಿರುವುದರಿಂದ ಮಲಬದ್ಧತೆಯ ಸಮಸ್ಯೆಯನ್ನು ಗುಣಪಡಿಸುತ್ತದೆ. ಇದು ಜೀರ್ಣಕ್ರಿಯೆಯ ಆರೋಗ್ಯಕ್ಕೂ ಒಳ್ಳೆಯದು. ದೀರ್ಘಕಾಲದ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಪರಿಣಾಮಕಾರಿ ಪರಿಹಾರವಾಗಿದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.