ಸಂಜು weds ಗೀತಾ ಪಾರ್ಟ್ 2 ಹಾಡುಗಳಿಗೆ ಧ್ವನಿಯಾಗಲಿರುವ ಸೋನು ನಿಗಮ್‌!

Sanju weds Geeta Part 2: ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ 2' ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ಸಾಗಿದೆ.. ಇದೀಗ ಈ ತಂಡಕ್ಕೆ ಹೊಸ ಸೇರ್ಪಡೆಯಾಗಿದ್ದು.. ಸೋನು ನಿಗಮ್‌ ಚಿತ್ರದ ಹಾಡುಗಳಿಗೆ ಧ್ವನಿಯಾಗಲಿದ್ದಾರೆ.. 

1 /6

ಈಗಾಗಲೇ ಸಂಜು ವೆಡ್ಸ್ ಗೀತಾ 2' ಚಿತ್ರತಂಡ ಸ್ವಿಟ್ಜರ್‌ಲ್ಯಾಂಡ್‌ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ.  

2 /6

ಇನ್ನು ಇತ್ತೀಚೆಗೆ ಈ ಚಿತ್ರತಂಡ ಮಾಧ್ಯಮಗಳ ಮುಂದೆ ಬಂದು ಸ್ವಿಟ್ಜರ್‌ಲ್ಯಾಂಡ್‌ ಶೂಟಿಂಗ್ ದೃಶ್ಯಗಳ ಪ್ರದರ್ಶನದ ಅನುಭವದ ಬಗ್ಗೆ ಮಾತನಾಡಿತ್ತು..  

3 /6

ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್, ಸಂಜು ವೆಡ್ಸ್ ಗೀತಾ1 ಸಿನಿಮಾದ ಅನುಭವಗಳನ್ನು ಮೆಲುಕುಹಾಕಿದ್ದರು..   

4 /6

ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು.. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ಮೊದಲ ಭಾಗದ ಯಶಸ್ಸಿನಿಂದಲೇ ಭಾಗ ಎರಡು ಇಷ್ಟು ಅದ್ದೂರಿಯಾಗಿ ಮೂಡಿಬರುತ್ತಿದೆ ಎನ್ನಲಾಗಿದೆ..   

5 /6

ಇದಲ್ಲದೇ 2024ರ ಬ್ಲಾಕ್ ಬಸ್ಟರ್ ಚಿತ್ರವಾಗಿ ಸಂಜು ವೆಡ್ಸ್ ಗೀತಾ ಮೂಡಿಬರಲಿದ್ದು..  2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ತಯಾರಿಯಲ್ಲಿದೆ ಚಿತ್ರತಂಡ..  

6 /6

ಈ ಚಿತ್ರವನ್ನು ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು..ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವೀ ಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿದ್ದಾರೆ.. ಇದಲ್ಲದೇ ಇದೀಗ ಸೋನು ನಿಗಮ್‌ ಈ ಚಿತ್ರದ ಹಾಡುಗಳಿಗೆ ಧ್ವನಿಯಾಗಲಿದ್ದಾರೆ..