ಹೆಣ್ಣು ಮಕ್ಕಳಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ಯೋಜನೆ: ನಿಮ್ಮ ಮಗಳಿಗೆ ಸಿಗುತ್ತೆ 15 ಲಕ್ಷ ರೂ.

                                         

State Bank of India: ಭಾರತದ ಸರ್ಕಾರಿ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಹೆಣ್ಣು ಮಕ್ಕಳಿಗಾಗಿ ವಿಶೇಷ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡುವ ಮೂಲಕ ಪೋಷಕರು ತಮ್ಮ ಮಗಳ ಅಧ್ಯಯನ ಅಥವಾ ಮದುವೆಗಾಗಿ ಬೃಹತ್ ಮೊತ್ತದ ಹಣವನ್ನು ಕೂಡಿಡಬಹುದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಡೆಸುತ್ತಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಾಹಿತಿ ನೀಡಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಹೆಣ್ಣು ಮಕ್ಕಳಿಗೆ ಸಂಪೂರ್ಣ 15 ಲಕ್ಷ ರೂ.ಗಳನ್ನು ನೀಡುತಲಾಗುತಿದೆ ಎಂದು ಎಸ್‌ಬಿಐ ತಿಳಿಸಿದೆ.  ಈ ಹಣವ ನ್ನು ಮಗಳ ಅಧ್ಯಯನ ಅಥವಾ ಮದುವೆಗಾಗಿ ಬಳಸಬಹುದಾಗಿದೆ. 

2 /5

ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಎಸ್‌ಬಿ‌ಐ, ಬ್ಯಾಂಕ್‌ನಿಂದ ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ ಕೇವಲ 250 ರೂಪಾಯಿಗಳನ್ನು ಠೇವಣಿ ಮಾಡುವ ಮೂಲಕ ನಿಮ್ಮ ಮಗಳನ್ನು ಲಕ್ಷಾಧಿಪತಿಯಾಗಿ ಮಾಡಬಹುದು ಎಂದು ತಿಳಿಸಿದೆ. 

3 /5

ಸುಕನ್ಯಾ ಸಮೃದ್ಧಿ ಯೋಜನೆ: ಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮೇಲೆ ಖಚಿತ ಆದಾಯ ಲಭ್ಯವಾಗಲಿದೆ. ಮಾತ್ರವಲ್ಲ, ಇದರಲ್ಲಿ ಹೂಡಿಕೆ ಮಾಡುವುದರಿಂದ ಆದಾಯ ತೆರಿಗೆ ವಿನಾಯಿತಿಯೂ ಲಭ್ಯವಿದೆ. 

4 /5

ಹೆಣ್ಣು ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸುವ ಸಲುವಾಗಿ ಆರಂಭಿಸಲಾಗಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಪ್ರಸ್ತುತ ಸರ್ಕಾರವು 8% ಬಡ್ಡಿಯನ್ನು ನೀಡುತ್ತಿದೆ. 

5 /5

ಗಮನಾರ್ಹವಾಗಿ, ಪೋಷಕರು ಎರಡು ಹೆಣ್ಣುಮಕ್ಕಳಿಗೆ ಈ ಯೋಜನೆಯ ಲಾಭವನ್ನು ಪಡೆಯಬಹುದು. ಒಂದೊಮ್ಮೆ ಮೊದಲೇ ಒಂದು ಹೆಣ್ಣು ಮಗು ಇದ್ದು, ಬಳಿಕ ಅವಳಿ ಹೆಣ್ಣು ಮಕ್ಕಳಾದರೆ ಅಂತಹ ಸಂದರ್ಭದಲ್ಲಿ ಮೂವರು ಹೆಣ್ಣು ಮಕ್ಕಳಿಗೆ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.