2011ರ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ದಾಖಲೆ ಪುನರಾವರ್ತಿಸಿದ ಸ್ಪಿನ್ನರ್ ರವೀಂದ್ರ ಜಡೇಜಾ
ಈಡನ್ ಗಾರ್ಡನ್ಸ್‌ನ ಐತಿಹಾಸಿಕ ಮೈದಾನದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ (ಒಡಿಐ ವಿಶ್ವಕಪ್-2023) ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್‌ಗಳ ಬೃಹತ್ ಜಯಭೇರಿ ಬಾರಿಸಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 101 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ಸಚಿನ್ ತೆಂಡೂಲ್ಕರ್ ಅವರ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟಿದರು. ಇದಲ್ಲದೆ, ಸ್ಪಿನ್ನರ್ ರವೀಂದ್ರ ಜಡೇಜಾ ಯುವರಾಜ್ ಸಿಂಗ್ ದಾಖಲೆಯನ್ನು ಪುನರಾವರ್ತಿಸಿದ್ದಾರೆ.
ಹೌದು, ನಿನ್ನೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸುವ ಮೂಲಕ 2011ರ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಮಾಡಿದ್ದ ದಾಖಲೆಯನ್ನು ಪುನರಾವರ್ತಿಸಿದ್ದಾರೆ.
2011ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಯುವರಾಜ್ ಸಿಂಗ್ 5 ವಿಕೆಟ್ ಪಡೆದಿದ್ದರು.
ಭಾನುವಾರ ನಡೆದ ಪಂದ್ಯದಲ್ಲಿ ಅತಿ ಹೆಚ್ಚು 5 ವಿಕೆಟ್ ಪಡೆಯುವ ಮೂಲಕ ವಿಶ್ವಕಪ್ ಇತಿಹಾಸದಲ್ಲಿ, ಯುವರಾಜ್ ಸಿಂಗ್ ನಂತರ 5 ವಿಕೆಟ್ ಪಡೆದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ರವೀಂದ್ರ ಜಡೇಜಾ 12 ವರ್ಷಗಳ ಬಳಿಕ ವಿಶ್ವಕಪ್‌ನಲ್ಲಿ ಈ ದಾಖಲೆ ಪುನರಾವರ್ತನೆಗೊಳ್ಳುವಂತೆ ಮಾಡಿದ್ದಾರೆ.