ಗುರು-ಶನಿಯ ವಿಶೇಷ ಕೃಪಾವೃಷ್ಟಿಯಿಂದ 3 ರಾಶಿಗಳ ಜನರ ಮನೆಯಂಗಳದಲ್ಲಿ ನಲಿದಾಡುವಳು ಧನಲಕ್ಷ್ಮಿ!
ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ತಿಂಗಳಿನಲ್ಲಿ ಗಜಕೇಸರಿ ಹಾಗೂ ತ್ರಿಕೋನ ರಾಜಯೋಗಗಳು ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುತೊಳ್ಳುತ್ತಿದೆ (Spiritual News In Kannada).
ತುಲಾ ರಾಶಿ: ನಿಮ್ಮ ಪಾಲಿಗೆ ಗಜಕೇಸರಿ ರಾಜಯೋಗ ಮತ್ತು ತ್ರಿಕೋನ ರಾಜಯೋಗ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಇದರ ಜೊತೆಗೆ ಕೌಟುಂಬಿಕ ಜೀವನದಲ್ಲಿ ಖುಷಿಗಳ ಆಗಮನವಾಗಲಿದೆ. ಕೋರ್ಟ್ ಕಚೇರಿಗಳಲ್ಲಿ ಜಯ ನಿಮ್ಮದಾಗಲಿದೆ. ವ್ಯಾಪಾರ ವರ್ಗದ ಜನರಿಗೆ ಧನಲಾಭದ ಎಲ್ಲಾ ಸಾಧ್ಯತೆಗಳಿವೆ. ವ್ಯಾಪಾರ ವಿಸ್ತರಣೆಯ ಎಲ್ಲಾ ಸಾಧ್ಯತೆಗಳಿವೆ. ಸಂಗೀತ, ಚಲನಚಿತ್ರೋದ್ಯಮ, ರಂಗಭೂಮಿಗೆ ಸಂಬಂಧಿಸಿದ ಜನರಿಗೆ ಈ ಸಮಯ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ.
ಮಕರ ರಾಶಿ: ಗಜಕೇಸರಿ ಹಾಗೂ ತ್ರಿಕೋನ ರಾಜಯೋಗ ರೂಪುಗೊಳ್ಳುವುದರಿಂದ ನಿಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಮನೆ-ಆಸ್ತಿಪಾಸ್ತಿ ಖರೀದಿಸುವ ಎಲ್ಲಾ ಸಾಧ್ಯತೆಗಳಿವೆ. ಇದಲ್ಲದೆ ಇತರೆ ಐಷಾರಾಮಿ ವಸ್ತುಗಳನ್ನು ಖರೀದಿಸುವಿರಿ. ಪಿತ್ರಾರ್ಜಿತ ಆಸ್ತಿಯಿಂದ ನಿಮಗೆ ಲಾಭ ಸಿಗುವ ಸಾಧ್ಯತೆ ಇದೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಅತ್ತೆ ಮನೆಯವರ ಜೊತೆಗೆ ನಿಮ್ಮ ಸಂಬಂಧ ಸುಧಾರಣೆಯಾಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಧಾರಿಸಲಿದೆ. ನಿಂತುಹೋದ ಕೆಲಸ ಕಾರ್ಯಗಳಿಗೆ ಮತ್ತೆ ವೇಗ ಸಿಗಲಿದೆ.
ಮೇಷ ರಾಶಿ: ಗಜಕೇಸರಿ ರಾಜಯೋಗ ಹಾಗೂ ತ್ರಿಕೋನ ರಾಜಯೋಗಗಳ ರೂಪುಗೊಳ್ಳುವಿಕೆ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ಬಾಳಸಂಗಾತಿ ಭಾಗ್ಯ ಪ್ರಾಪ್ತಿಯಾಗಲಿದೆ. ಧನ ಪ್ರಾಪ್ತಿಯ ಎಲ್ಲಾ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಯಾತ್ರೆಗೆ ಹೋಗುವ ಸಾಧ್ಯತೆ ಇದೆ. ಜೊತೆಗೆ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)