ಬುಧ-ಶುಕ್ರರ ಮೈತ್ರಿಯಿಂದ ನಿರ್ಮಾಣಗೊಳ್ಳುತ್ತಿದೆ ಅದ್ಭುತ ಯೋಗ, ಲಕ್ಷ್ಮಿ-ನಾರಾಯಣರ ಕೃಪೆಯಿಂದ ಈ ಜನರಿಗೆ ಆಕಸ್ಮಿಕ ಧನಲಾಭ ಯೋಗ!
Budh Shukra Yuti: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಶುಕ್ರ-ಬುಧರ ಮೈತ್ರಿಯ ಕಾರಣ ಲಕ್ಷ್ಮಿ ನಾರಾಯಣ ಯೋಗ ರೂಪುಗೊಳ್ಳಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ವೃತ್ತಿ ಜೀವನ ಹಾಗೂ ವ್ಯಾಪಾರದಲ್ಲಿ ಉನ್ನತಿ ಹಾಗೂ ಆಕಸ್ಮಿಕ ಧನಲಾಭ ಯೋಗ ನಿರ್ಮಾಣಗೊಳ್ಳುತ್ತಿದೆ(Spiritual News In Kannada).
ಧನು ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ನೆರವೇರುತ್ತಿದೆ. ಹೀಗಾಗಿ ಇದು ನಿಮ್ಮ ಪಾಲಿಗೆ ಸಾಕಷ್ಟು ಶುಭ ಸಾಬೀತಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲು ಇದು ಉತ್ತಮ ಕಾಲಾವಕಾಶವಾಗಿದೆ. ನಿಮಗೆ ಉತ್ತಮ ಫಲಿತಾಂಶಗಳೂ ಕೂಡ ಲಭಿಸಲಿವೆ. ಮನೆ ಅಥವಾ ಕುಟುಂಬದಲ್ಲಿ ನೆರವೇರುವ ಧಾರ್ಮಿಕ ಹಾಗೂ ಮಂಗಳ ಕಾರ್ಯದಲ್ಲಿ ಭಾಗಿಯಾವುವಿರಿ. ಇದಲ್ಲದೆ ನೀವು ಧಾರ್ಮಿಕ ಹಾಗೂ ಇತರ ಯಾತ್ರೆಗಳ ಮೇಲೂ ಹೋಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣ ವೃಶ್ಚಿಕ ರಾಶಿಯ ಜಾತಕದವರಿಗೆ ಸಾಕಷ್ಟು ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ವ್ಯಾಪಾರದಲ್ಲಿ ಅಪಾರ ಆರ್ಥಿಕ ಪ್ರಗತಿ ಕಂಡುಬರಲಿದೆ, ಯಶಸ್ಸು ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ನೌಕರಿಯಲ್ಲಿ ಉತ್ತಮ ಅವಕಾಹಗಳು ಪ್ರಾಪ್ತಿಯಾಗಲಿವೆ. ಇನ್ನೊಂದೆಡೆ ನಿಮ್ಮ ಬಳಿ ಇರುವ ಹಣದ ಹೆಚ್ಚಳಕ್ಕೂ ಕೂಡ ನಿಮಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭದ ಜೊತೆಗೆ ವ್ಯಾಪಾರ ವಿಸ್ತರಣೆಗೆ ಅವಕಾಶ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ತಂದೆಯ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ.
ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಈ ಲಕ್ಷ್ಮಿ ನಾರಾಯಣ ಯೋಗ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಆರ್ಥಿಕ ವೇದಿಕೆಯಲ್ಲಿ ಈ ಯೋಗ ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸದಲ್ಲಿ ನೀವು ಅಪಾರ ಹೆಚ್ಚಳವನ್ನು ನೀವು ಗಮನಿಸಬಹುದು. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು-ಚೈತನ್ಯ ಕಾಣಸು ಸಿಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧದಲ್ಲಿ ಸಾಕಷ್ಟು ಸುಧಾರಣೆ ಕಂಡುಬರಲಿದೆ. ಆರೋಗ್ಯದಲ್ಲಿಯೂ ಕೂಡ ಪಾರ ಚೇತರಿಕೆ ಇರಲಿದ್ದು, ಆದಾಯದಲ್ಲಿ ಹೆಚ್ಚಳ ಸಂಹವಿಸುವ ಸಾಧ್ಯತೆ ಇದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)