ಇಂದಿನಿಂದ ಬರೋಬ್ಬರಿ ಒಂದು ವಾರದ ಬಳಿಕ ಈ ಶುಭಯೋಗ ನಿರ್ಮಾಣ, ಈ ಜನರ ಮನೆಯಲ್ಲಿ ನಲಿದಾಡಲಿದ್ದಾಳೆ ವಿಷ್ಣುಪ್ರಿಯೆ!
Budhaaditya Yoga: ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಇಂದಿನಿಂದ ಬರೋಬ್ಬರಿ ಒಂದು ವಾರದ ಬಳಿಕ ಸಿಂಹ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಜೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಶುಭಯೋಗ ಎಂದೇ ಭಾವಿಸಲಾಗುವ ಈ ಯೋಗ ಒಟ್ಟು ಮೂರು ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಬೆಳಗಲಿದ್ದು, ಅವರ ಜೀವನದಲ್ಲಿ ಅಪಾರ ಧನಪ್ರಾಪ್ತಿಗೆ ಕಾರಣವಾಗಲಿದೆ (Spiritual News In Kannada).
ತುಲಾ ರಾಶಿ: ತುಲಾ ರಾಶಿಯ ಜಾತಕದವರಿಗೆ ಬುದ್ಧಾದಿತ್ಯ ರಾಜಯೋಗ ಅತ್ಯಂತ ಲಾಭಕಾರಿ ಸಾಬೀತಾಗಲಿದೆ. ಏಕೆಂದರೆ, ಈ ರಾಜಯೋಗ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಭಾರಿ ಹೆಚ್ಚಳ ಸಂಭವಿಸುವ ಸಾದ್ಯತೆ ಇದೆ. ಇದಲ್ಲದೆ ಕೆಲಸ-ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲಾ ವಿವಾದಗಳು ಅಂತ್ಯವಾಗಲಿವೆ. ಹೊಸ ಯೋಜನೆಗಳ ಮೇಲೆ ಕಾರ್ಯನಿರ್ವಹಿಸಿದರೆ ನಿಮಗೆ ಭಾರಿ ಲಾಭ ಉಂಟಾಗಲಿದೆ ಹಾಗೂ ಭವಿಷ್ಯದಲ್ಲಿ ನಿಮ್ಮ ಈ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಲಾಟರಿ, ಷೇರುಮಾರುಕಟ್ಟೆ ವ್ಯವಹಾರಗಳಲ್ಲಿ ನಿಮಗೆ ಅಪಾರ ಧನಲಾಭ ಸಿಗಲಿದೆ.
ಮೇಷ ರಾಶಿ: ಬುದ್ಧಾದಿತ್ಯ ರಾಜಯೋಗ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರೂಪುಗೊಳ್ಳಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಇದಲ್ಲದೆ ಸೂರ್ಯ ಗೋಚರದ ಪ್ರಭಾವದ ಕಾರಣ ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಆರ್ಥಿಕ ವಿಷಯಗಳಲ್ಲಿ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಹಣಕಾಸಿನ ಉಳಿತಾಯ ಮಾಡುವಲ್ಲಿ ನೀವು ಯಶಸ್ಸನ್ನು ಸಂಪಾದಿಸುವಿರಿ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಪ್ರಮೋಷನ್-ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ಹೀಗಿರುವಾಗ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ.
ಕರ್ಕ ರಾಶಿ: ಕರ್ಕ ರಾಶಿಯ ಜಾತಕದವರ ಧನಭಾವದಲ್ಲಿ ಈ ಯೋಗ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಮಾತನಾಡುವ ನಿಮ್ಮ ಶೈಲಿಯಲ್ಲಿ ಸುಧಾರಣೆ ಕಂಡು ಬರಲಿದೆ ಹಾಗೂ ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ಸಂಬಂಧ ಸುಧಾರಣೆಯಾಗಲಿದೆ. ಈ ಅವಧಿಯಲ್ಲಿ ವ್ಯಾಪಾರಿಗಳಿಗೆ ಅವರ ಸಿಲುಕಿಕೊಂಡ ಹಣ ಮರಳಿ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ನಿಮಗೆ ಭಾರಿ ಲಾಭ ಉಂಟಾಗಿ, ಸುಖ-ಸಮೃದ್ಧಿ ಹೆಚ್ಚಾಗಲಿದೆ. ವಿದೇಶ ವ್ಯಾಪಾರ ಸಂಬಂಧ ಹೊಂದಿದವರಿಗೆ ಉತ್ತಮ ಲಾಭ ಪ್ರಾಪ್ತಿಯಾಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)