ಆಗಸ್ಟ್ 18 ರಿಂದ ಈ ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆ ಆರಂಭ, ಶ್ರೀಹರಿ ಲಕ್ಷ್ಮಿ ಕೃಪೆಯಿಂದ ಅಪಾರ ಧನ-ಸಂಪತ್ತು ಪ್ರಾಪ್ತಿಯ ಯೋಗ!
Venus Rise 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕರ್ಕ ರಾಶಿಯಲ್ಲಿ ಶುಕ್ರನ ಉದಯ ನೆರವೇರಲಿದೆ. ಶುಕ್ರನ ಈ ಉದಯ ಒಟ್ಟು 3 ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಪಾರ ಯಶಸ್ಸು, ಧನ-ಸಂಪತ್ತನ್ನು ಕರುಣಿಸಲಿದೆ (Spiritual News In Kannada).
ಮಕರ ರಾಶಿ: ನಿಮ್ಮ ಪಾಲಿಗೆ ಶುಕ್ರನ ಉದಯ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಆತನ ಈ ಉದಯ ನೆರವೇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ತುಂಬಿರಲಿದೆ. ಜೀವನದಲ್ಲಿ ಪ್ರೇಮ, ಆಕರ್ಷಣೆ ಹೆಚ್ಚಾಗಲಿದ್ದು, ಹಣಕಾಸಿನ ಮುಗ್ಗಟ್ಟು ಕೂಡ ನಿವಾರಣೆಯಾಗಲಿದೆ. ನಿಮ್ಮ ಕೌಟುಂಬಿಕ ಜೀವನವೂ ಕೂಡ ಸುಮಧುರತೆಯಿಂದ ಕೂಡಿರಲಿದೆ. ಪಾರ್ಟ್ನರ್ಶಿಪ್ ಕೆಲಸದಲ್ಲಿಯೂ ಕೂಡ ನಿಮಗೆ ಲಾಭ ಉಂಟಾಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ.
ಮೀನ ರಾಶಿ: ಶುಕ್ರನ ಈ ಉದಯ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಶುಕ್ರನಾ ಉದಯ ನಿಮ್ಮ ಪಾಲಿಗೆ ಸಾಕಷ್ಟು ಲಾಭಪ್ರದ ಸಿದ್ಧ ಸಾಬೀತಾಗಲಿದೆ. ನಿಮ್ಮ ಜಾತಕದಲ್ಲಿ ಶುಕ್ರ ತೃತೀಯ ಹಾಗೂ ಅಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಆಕಷ್ಮಿಕ ಧನಲಾಭದ ಪ್ರಬಲ ಯೋಗವಿದೆ. ಸಂಶೋಧನೆಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಸಮಯ ಸಾಕಷ್ಟು ಅದ್ಭುತವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ. ನಿಮ್ಮ ಸಾಮಾಜಿಕ ಒಡನಾಟ ಹೆಚ್ಚಾಗಲಿದೆ ಮತ್ತು ನಿಮಗಾಗಿ ನೀವು ಒಂದು ಒಳ್ಳೆಯ ನೆಟ್ವರ್ಕ್ ನಿರ್ಮಿಸುವಲ್ಲಿ ಯಶಸ್ವಿಯಾಗಿವಿರಿ.
ಮಿಥುನ ರಾಶಿ: ಶುಕ್ರ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಪ್ರಬಲವಾಗಿರಲಿದೆ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಅವಕಾಶಗಳು ಒದಗಿಬರಲಿವೆ. ಮತ್ತೊಂದೆಡೆ ನೀವು ನಿಮ್ಮ ಮಾತಿನ ಪ್ರಭಾವವನ್ನು ಇತರರ ಮೇಲೆ ಬೀರಲಿರುವಿರಿ. ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅವರ ಸಿಲುಕಿ ಹಾಕಿಕೊಂಡ ಹಣ ಅವರಟ್ಟ ಮರಳಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)