ವರ್ಷ 2025ರವರೆಗೆ ಈ ರಾಶಿಗಳ ಜನರಿಗೆ ಭಾರಿ ಧನಪ್ರಾಪ್ತಿಯ ಯೋಗ, ಜೀವನದಲ್ಲಿ ಹಣದ ಹೊಳೆಯೇ ಹರಿಸಲಿದ್ದಾಳೆ ಧನದ ಅಧಿದೇವತೆ!

Fri, 11 Aug 2023-1:16 pm,

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಅಷ್ಟಮ ಹಾಗೂ ನವಮ ಭಾವಕ್ಕೆ ಶನಿ ಅಧಿಪತಿಯಾಗಿದ್ದಾನೆ. ಇನ್ನೊಂದೆಡೆ ಆತ ಪ್ರಸ್ತುತ ನಿಮ್ಮ ಜಾತಕದಲ್ಲಿ ನವಮೇಷನಾಗಿದ್ದಾನೆ ಅರ್ಥಾತ್ ನವಮ ಭಾವದಲ್ಲಿ ವಿರಾಜಮಾನನಾಗಿದ್ದಾನೆ. ಹೀಗಾಗಿ ನಿಮಗೆ ಶನಿಯ ಎರಡೂವರೆವರ್ಷಗಳ ಕಾಟದಿಂದ ಮುಕ್ತಿ ಸಿಗಲಿದೆ ಮತ್ತು ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ನೀವು ಯಾತ್ರೆ ಪ್ಲಾನ್ ಮಾಡಬಹುದು. ಆದರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸ್ವಲ್ಪ ಜಾಗರೂಕರಾಗಿರಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದ್ದು, ನೌಕರಿಯಲ್ಲಿ ಪದೋನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಅಥವಾ ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಸಾಲಬಾಧೆಯಿಂದ ಮುಕ್ತಿ ಸಿಗಳಿದ್ದು, ಬಿಸ್ನೆಸ್ ನಲ್ಲಿ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯಬೇಡಿ. ಏಕೆಂದರೆ ಅದರಿಂದ ನಿಮಗೆ ಲಾಭ ಉಂಟಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಹಾಗೂ ಷಷ್ಟಮ ಭಾವಕ್ಕೆ ಶನಿ ಅಧಿಪತಿಯಾಗಿದ್ದಾನೆ. ಕುಂಭ ರಾಶಿಯಲ್ಲಿ ಆತನ ಪ್ರವೇಶದಿಂದ ನಿಮ್ಮ ರಾಶಿಯ ಷಷ್ಟಮ ಭಾವದಲ್ಲಿ ಆತನ ಗೋಚರ ನೆರವೇರಲಿದೆ. ಹೀಗಿರುವಾಗ ಕನ್ಯಾ ರಾಶಿಯವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಎದುರಾಳಿಗಾಳಿಗೆ ನೀವು ದುಬಾರಿಯಾಗಿ ಪರಿಣಮಿಸುವಿರಿ. ನಿಮ್ಮ ಜಾತಕದಲ್ಲಿ ಶನಿಯ ಸ್ಥಾನ ಬಲಿಷ್ಟವಾಗಿರುವ ಕಾರಣ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರಿ-ಬಿಸ್ನೆಸ್ ನಲ್ಲಿಯೂ ಅಪಾರ ಯಶಸ್ಸಿನ ಜೊತೆಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ ಎಂಬುದನ್ನು ನೆನಪಿನಲ್ಲಿಡಿ. 

ತುಲಾ ರಾಶಿ: ನಿಮ್ಮ ಗೋಚರ ಜಾತಕದ ಚತುರ್ಥ ಹಾಗೂ ಪಃಚಮ ಭಾವಕ್ಕೆ ಶನಿ ಅಧಿಪತಿ ಮತ್ತು ಪ್ರಸ್ತುತ ಆತ ಪಂಚಮ ಭಾವದಲ್ಲಿಯೇ ವಿರಾಜಮಾನನಾಗಿದ್ದಾನೆ. ಹೀಗಾಗಿ ಶನಿಯ ಎರಡೂವರೆ ವರ್ಷಗಳ ಕಾಟದಿಂದ ನಿಮಗೆ ಸಂಪೂರ್ಣ ಮುಕ್ತಿ ಸಿಕ್ಕಂತಾಗಿದೆ. ಹೀಗಾಗಿ ಆರ್ಥಿಕ, ಶಾರೀರಿಕ ಹಾಗೂ ಮಾನಸಿಕ ಸಮಸ್ಯೆಗಳಿಂದ ನಿಮಗೆ ಮುಕ್ತಿ ಸಿಗಲಿದೆ. ವೈವಾಹಿಕ ಜೀವನದಲ್ಲಿ ಖುಷಿಗಳ ಆಗಮನವಾಗಲಿದೆ. ಬಾಳಸಂಗಾತಿಯ ಮಾಧ್ಯಮದಿಂದ ನಿಮಗೆ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಆದಾಯ ವೇಗವಾಗಿ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. 

ಧನು ರಾಶಿ: ನಿಮ್ಮ ಗೋಚರ ಜಾತಕದ ದ್ವಿತೀಯ ಹಾಗೂ ತೃತೀಯ ಭಾವಕ್ಕೆ ಶನಿ ಅಧಿಪತಿಯಾಗಿದ್ದು, ತೃತೀಯ ಭಾವದಲ್ಲಿಯೇ ವಿರಾಜಮಾನನಾಗಿದ್ದಾನೆ. ಹೀಗಾಗಿ ಶನಿಯ ಸಾಡೇಸಾತಿಯಿಂದ ನಿಮಗೆ ಸಂಪೂರ್ಣ ಮುಕ್ತಿ ಸಿಕ್ಕಂತಾಗಿದೆ. ಹೀಗಿರುವಾಗ ನಿಮ್ಮ ಜೀವನ ಖುಷಿಗಳಿಂದ ತುಂಬಿ ತುಳುಕಲಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಾರ್ಯಕ್ಷೇತ್ರದ್ಲ್ಲಿಯೂ ಕೂಡ ನಿಮ್ಮ ಕೆಲಸಕ್ಕೆ ಮನ್ನಣೆ ದೊರಯಲಿದೆ. ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವುದರ ಜೊತೆಗೆ ನಿಮಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ದಾಂಪತ್ಯ ಜೀವನ, ಲವ್ ಲೈಫ್ ಕೂಡ ಉತ್ತಮವಾಗಿರಲಿದೆ. 

(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link