ಮಂತ್ರಾಲಯದ ರಾಯರ ಹುಂಡಿಗೆ ಹರಿದು ಬಂತು ಕೋಟ್ಯಂತರ ರೂ. ಕಾಣಿಕೆ
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜುಲೈ ತಿಂಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕೇವಲ 29 ದಿನಗಳಲ್ಲಿ ಭಕ್ತರಿಂದ 1.93,17,766 ರೂ. ಕಾಣಿಕೆ ಸಂಗ್ರಹವಾಗಿದೆ.
ಇನ್ನೂ 4,04,059 ರೂ.ನಷ್ಟು ನಾಣ್ಯಗಳು ಹುಂಡಿಯಲ್ಲಿ ಸಂಗ್ರಹವಾಗಿದ್ದು, ಈ ಬಾರಿ ಒಟ್ಟು 1,97,21,825 ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಮಂತ್ರಾಲಯದ ಆಡಳಿತ ಮಂಡಳಿ ಘೋಷಣೆ ಮಾಡಿದೆ.
ರಾಘವೇಂದ್ರ ಮಠಕ್ಕೆ ಬರುವ ಭಕ್ತರು ಕಾಣಿಕೆ ಜೊತೆಗೆ ರಾಯರಿಗೆ ಚಿನ್ನ-ಬೆಳ್ಳಿಯನ್ನು ಸಮರ್ಪಣೆ ಮಾಡಿದ್ದಾರೆ. ಈ ಬಾರಿ 16 ಗ್ರಾಂ ಚಿನ್ನ, 745 ಗ್ರಾಂ ಬೆಳ್ಳಿ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯ ಕ್ಷೇತ್ರದ ಆಡಳಿತ ಮಂಡಳಿಯ ಸಮ್ಮುಖದಲ್ಲಿ ನಡೆದಿದ್ದು, ನೂರಾರು ಸಿಬ್ಬಂದಿಗಳು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ರಾಯರ ಮಟ್ಟಕ್ಕೆ ಪ್ರತಿದಿನ ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ಹೀಗೆ ಭೇಟಿ ನೀಡುವ ಭಕ್ತರು ರಾಯರಿಗೆ ಕಾಣಿಕೆಯನ್ನು ಸಮರ್ಪಿಸುತ್ತಿದ್ದಾರೆ.