Hardik Pandya: ಐಪಿಎಲ್ ತಯಾರಿ ಆರಂಭಿಸಿದ ಹಾರ್ದಿಕ್ ಪಾಂಡ್ಯ
ಐಪಿಎಲ್ ನಲ್ಲಿ ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂದಿನ ಐಪಿಎಲ್ ಸೀಸನ್‌ಗಾಗಿ ವರ್ಕ್ಔಟ್ ಆರಂಭಿಸಿದಾರೆ.
ದೀರ್ಘ ಸಮಯದಿಂದ ಗಾಯದ ಸಮಸ್ಯೆಯಿಂದಾಗಿ ಮೈದಾನದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ವರ್ಕ್ಔಟ್ ಗೆ ಸಂಬಂಧಿಸಿದಂತೆ ತಮ್ಮ ಸಾಮಾಜಿಕ ಜಾಲತನಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
2024ರ ಐಪಿಎಲ್ ನಲ್ಲಿ ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲು ಪೂರ್ಣ ಪ್ರಮಾಣದಲ್ಲಿ ತಯಾರಿ ಆರಂಭಿಸಿರುವ ಹಾರ್ದಿಕ್ ಪಾಂಡ್ಯ ಕಳೆದ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದರು.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಮಾದರಿಯಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಇದುವರೆಗೂ ಭಾರತಕ್ಕಾಗಿ 92 ಟಿ20 ಪಂದ್ಯಗಳನ್ನು ಆಡಿರುವ ಹಾರ್ದಿಕ್ ಪಾಂಡ್ಯ 3 ಅರ್ಧ ಶತಕಗಳ ಸಹಾಯದಿಂದ 1348 ರನ್ಗಳನ್ನು ಗಳಿಸಿದ್ದಾರೆ ಮತ್ತು 73 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಕೊನೆಯದಾಗಿ ಏಕದಿನ ವಿಶ್ವಕಪ್‌ನಲ್ಲಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ , ಕಳೆದ ವರ್ಷ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಹಾರ್ದಿಕ್ ಆಡಿದ್ದರು. ಬಳಿಕ ಗಾಯದಿಂದಾಗಿ ವಿಶ್ವಕಪ್‌ನ ಮಧ್ಯದಲ್ಲಿ ಅವರು ತಂಡದಿಂದ ಹೊರಗುಳಿಯಬೇಕಾಯಿತು.