BPL ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

                     

ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿದ್ದ ಅಕ್ಕಿ, ಗೋಧಿಗೆ ಬ್ರೇಕ್ ಹಾಕುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /4

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿದ್ದ ಅಕ್ಕಿ, ಗೋಧಿಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರ  ಅಕ್ಕಿ ಹಾಗೂ ಗೋಧಿಗೆ ಕನಿಷ್ಠ ಬೆಲೆ ನಿಗದಿ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

2 /4

ಬಿಪಿಎಲ್ ಪಡಿತರ ಚೀಟಿ (Ration Card) ಹೊಂದಿರುವವರಿಗೆ ಉಚಿತವಾಗಿ ಅಕ್ಕಿ, ಗೋಧಿ ನೀಡುವ ಬದಲು ಪ್ರತಿ ಕೆಜಿ ಅಕ್ಕಿ ಹಾಗೂ ಗೋಧಿಗೆ 2 ರೂ. ನಿಂದ 3 ರೂ. ವರೆಗೆ ದರ ನಿಗದಿ ಮಾಡುವಂತೆ ಆಹಾರ ಇಲಾಖೆಗೆ ಸಂಬಂಧಿಸಿದ ಕೆಲ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ - ಪಡಿತರ ಚೀಟಿದಾರರಿಗೊಂದು 'ಎಚ್ಚರಿಕೆ ಸಂದೇಶ' ನೀಡಿದ ರಾಜ್ಯ ಸರ್ಕಾರ!

3 /4

ಉಚಿತ ಅಕ್ಕಿ (Rice), ಗೋಧಿ ವಿತರಿಸುವ ಬದಲು ಅದಕ್ಕೆ ಕನಿಷ್ಠ ದರ ನಿಗದಿ ಮಾಡುವುದು ಸೂಕ್ತ ಎಂದು ಆಹಾರ ಇಲಾಖೆಗೆ ಸಂಬಂಧಿಸಿದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಒಂದೊಮ್ಮೆ ಸರ್ಕಾರ ಈ ಬಗ್ಗೆ ಸಕಾರಾತ್ಮಕವಾಗಿ ತೀರ್ಮಾನ ಕೈಗೊಂಡರೆ ಬಜೆಟ್ (Budget)ನಲ್ಲಿ ಈ ಯೋಜನೆ ಸೇರ್ಪಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ - Ration Card ಹೊಂದಿರುವವರಿಗೆ ಸಿಗಲಿದೆ 2,500 ರೂ. ಈ ರಾಜ್ಯದ 2.5 ಕೋಟಿ ಜನರಿಗೆ ಲಾಭ

4 /4

ಪಡಿತರ ಚೀಟಿ ಹೊಂದಿರುವವರಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವ ಬದಲು ಅದಕ್ಕೆ ಕನಿಷ್ಠ ದರ ನಿಗದಿಗೊಳಿಸುವುದರಿಂದ ಸರ್ಕಾರದ ಆದಾಯ ಹೆಚ್ಚಾಗಲಿದೆ. ಅಕ್ಕಿಗೆ 3 ರೂ. ನಂತೆ ದರ ನಿಗದಿಗೊಳಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ತಿಂಗಳಿಗೆ 58 ಕೋಟಿ ರೂ. ಆದಾಯವಾಗಲಿದ್ದು ಇದರಿಂದ ಪೋಷಕಾಂಶ ಭರಿತ ಇನ್ನಷ್ಟು ಆಹಾರ ಧಾನ್ಯಗಳನ್ನು ವಿತರಿಸಬಹುದು ಎಂದು ಸರ್ಕಾರ ಚಿಂತಿಸುತ್ತಿದೆ ಎನ್ನಲಾಗಿದೆ.