ಈ 4 ವಸ್ತುಗಳನ್ನು ಸೇವಿಸುವುದರಿಂದ ದೇಹದಲ್ಲಿ ಹೆಚ್ಚುತ್ತದೆ ಕೆಟ್ಟ ಕೊಲೆಸ್ಟ್ರಾಲ್

Fri, 30 Dec 2022-4:40 pm,

 ಸಿಹಿ ಪದಾರ್ಥಗಳು ನಾಲಿಗೆಗೆ ಹೆಚ್ಚು ರುಚಿಸುತ್ತವೆ. ಆದರೆ ಅವು ಆರೋಗ್ಯಕ್ಕೆ ಒಳ್ಳೆಯದಲ್ಲ, ಅದರಲ್ಲಿರುವ ಸಕ್ಕರೆ ಒಡೆದು ಕೊಬ್ಬಾಗಿ ಮಾರ್ಪಾಡಾಗುತ್ತದೆ.  ಇದರಿಂದಾಗಿ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹೀಗಾಗಿ ನಿಮ್ಮ ದೈನಂದಿನ ಆಹಾರದಿಂದ ಸಕ್ಕರೆ, ಪುಡಿಂಗ್, ಕುಕೀಸ್, ಕೇಕ್ , ಸಿಹಿತಿಂಡಿಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ.

ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನುವ ಪ್ರವೃತ್ತಿಯು ಭಾರತದಲ್ಲಿ ಹೆಚ್ಚಿದೆ. ಆದರೆ ಇದರಿಂದಾಗಿ, ನಮ್ಮ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಇದರಲ್ಲಿ ಕ್ಯಾಲೋರಿಗಳ ಪ್ರಮಾಣವು ಅಧಿಕವಾಗಿರುತ್ತದೆ. 

ಸಂಸ್ಕರಿಸಿದ ಆಹಾರವನ್ನು  ದೀರ್ಘಕಾಲದವರೆಗೆ ಬಳಸಬಹುದು. ಈ ರೀತಿಯ ಆಹಾರದಲ್ಲಿ ಟ್ರಾನ್ಸ್ ಕೊಬ್ಬು ಮತ್ತು ಸೋಡಿಯಂನ ಅಂಶವು ಅಧಿಕವಾಗಿರುತ್ತದೆ. ಇದು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.  ಹೃದಯ ಕಾಯಿಲೆಗಳ ಅಪಾಯವನ್ನು ಕೂಡಾ ಉಂಟುಮಾಡುತ್ತದೆ.

ಮಾಂಸವನ್ನು ಪ್ರೋಟೀನ್‌ನ  ಪ್ರಮುಖ ಮೂಲವೆಂದು ಪರಿಗಣಿಸಲಾಗುತ್ತದೆ, ಇದನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬಹುದು. ಇದರಿಂದಾಗಿ ಹೆಚ್ಚಿನ ಪ್ರಮಾಣದ ಕೊಬ್ಬು ದೇಹದಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಮಾಂಸವನ್ನು ತಿನ್ನುವಾಗ ಅದನ್ನು ಕಡಿಮೆ ಎಣ್ಣೆಯಲ್ಲಿ ಬೇಯಿಸಿ ಮತ್ತು ಸೀಮಿತ ಪ್ರಮಾಣದಲ್ಲಿ ಸೇವಿಸಿ,.  ಇಲ್ಲದಿದ್ದರೆ ನಿಮ್ಮ ಆರೋಗ್ಯ ಹದಗೆಡಲು ನೀವೇ ಕಾರಣರಾಗುತ್ತೀರಿ.

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link