Summer Cool Drinks: ಬೇಸಿಗೆಯಲ್ಲಿ ಕೂಲ್, ಫ್ರೇಶ್, ಆರೋಗ್ಯವಾಗಿರಲು ಈ ಆರೋಗ್ಯಕರ ಪಾನೀಯಗಳನ್ನು ಕುಡಿಯಿರಿ
ಕಲ್ಲಂಗಡಿ ಜ್ಯೂಸ್ ಕುಡಿಯಲು ರುಚಿಕರ ಮಾತ್ರವಲ್ಲ, ದೇಹವನ್ನು ತೇವಾಂಶದಿಂದ ಇಡಲು ಸಹಕಾರಿ ಆಗಿದೆ. ಕಲ್ಲಂಗಡಿ ಹಣ್ಣಿನಲ್ಲಿ ನೀರಿನ ಅಂಶ ಹೆಚ್ಚಿರುವುದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಜ್ಯೂಸ್ ಕುಡಿಯುವುದು ತುಂಬಾ ಲಾಭದಾಯಕವಾಗಿದೆ.
ಉತ್ತಮ ಆರೋಗ್ಯಕ್ಕೆ ಅಮೃತವೆಂದು ಪರಿಗಣಿಸಲಾಗಿರುವ ಎಳನೀರು ಬೇಸಿಗೆಯಲ್ಲಿ ದೇಹದಲ್ಲಿನ ನೀರಿನ ಕೊರತೆಯನ್ನು ಪೂರೈಸುವಲ್ಲಿ ಬಹಳ ಪರಿಣಾಮಕಾರಿ ಆಗಿದೆ. ಅಷ್ಟೇ ಅಲ್ಲ, ಇದರಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಾಕಷ್ಟು ಕಂಡುಬರುತ್ತವೆ. ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಸೌತೆಕಾಯಿ ಮತ್ತು ಪುದೀನ ಎರಡೂ ಕೂಡ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸಲು ಮಜ್ಜಿಗೆ ಅತ್ಯುತ್ತಮ ಪಾನೀಯವಾಗಿದೆ.
ಬಿಲ್ವಪತ್ರೆ ಹಣ್ಣಿನ ಜ್ಯೂಸ್ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವುದರ ಜೊತೆಗೆ ಶಕ್ತಿ ವರ್ಧಕವಾಗಿಯೂ ಕೆಲಸ ಮಾಡುತ್ತದೆ. ಬೇಲ್ ರಸದಲ್ಲಿ ವಿಟಮಿನ್ ಸಿ, ಕಬ್ಬಿಣ ಮತ್ತು ಪೊಟ್ಯಾಸಿಯಮ್‌ನಂತಹ ಅನೇಕ ಅಗತ್ಯ ಪೋಷಕಾಂಶಗಳು ಕಂಡು ಬರುತ್ತವೆ. ಇದು ಉದರದ ಆರೋಗ್ಯಕ್ಕೆ ದಿವ್ಯೌಷಧವಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.