Sun-Saturn Naksthra Gochar 2024: ಶತಮಾನದ ಬಳಿಕ ಸೂರ್ಯ-ಶನಿಯಿಂದ ನಕ್ಷತ್ರ ಪರಿವರ್ತನೆ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

Thu, 04 Jan 2024-3:53 pm,

Sun-Saturn Naksthra Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯ ಉತ್ತರಾಷಾಢಾ ನಕ್ಷತ್ರವನ್ನು ಪ್ರವೇಶಿಸಲಿದ್ದರೆ, ಶನಿ ಶತಭಿಶಾ ನಕ್ಷತ್ರದ ಎರಡನೇ ಹಂತದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭವಾಗಲಿದೆ. (Spiritual News In Kannada)

ಕರ್ಕ ರಾಶಿ: ಸೂರ್ಯ ಹಾಗೂ ಶನಿಯ ನಕ್ಷತ್ರ ಪರಿವರ್ತನೆಗಳು ನಿಮಗೆ ಕಾಲಕಾಲಕ್ಕೆ ಧನಲಾಭವನ್ನು ತಂದುಕೊಡಲಿವೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡು ಬರಲಿದೆ. ವಾಹನ-ಆಸ್ತಿಪಾಸ್ತಿ ಖಾರಿದಿರುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ವೃದ್ಧಿಯಾಗಲಿದ್ದು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. 

ಸಿಂಹ ರಾಶಿ: ನಿಮ್ಮ ಆದಾಯ ಹಾಗೂ ಲಾಭದ ಲೆಕ್ಕಾಚಾರದಲ್ಲಿ ಶನಿ ಹಾಗೂ ಸೂರ್ಯರ ನಕ್ಷತ್ರ ಪರಿವರ್ತನೆ ನಿಮ್ಮ ಪಾಲಿಗೆ ಲಾಭದಾಯಕವಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ ಹೆಚ್ಚಳ ಉಂಟಾಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಮನೆಯಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಶಾಂತಿಯ ವಾತಾವರಣ ಇರಲಿದೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಮಕ್ಕಳಿಲ್ಲದವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಿಂದ ಲಾಭ ನಿಮ್ಮದಾಗಲಿದೆ. 

ತುಲಾ ರಾಶಿ: ಶನಿ ಸೂರ್ಯರ ನಕ್ಷತ್ರ ಪರಿವರ್ತನೆಯಿಂದ ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಆತ್ಮ ವಿಶ್ವಾಸ ಹೆಚ್ಚಾಗಲಿದೆ, ಕಾರ್ಯಕ್ಷೇತ್ರದಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗಲಿದ್ದು,  ಆರ್ಥಿಕ ಲಾಭ ನಿಮ್ಮದಾಗಲಿದೆ. ದೇಶ-ವಿದೇಶಗಳಿಗೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆಗಳು ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿವೆ. ಘನತೆ-ಗೌರವ ಹೆಚ್ಚಾಗಿ ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ಪ್ರೇಮಸಂಬಂಧದಲ್ಲಿ ಯಶಸ್ಸನ್ನು ಸಾಧಿಸುವಿರಿ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link