Makar Sankranti Lucky Zodiac Signs: ಮಕರ ಸಂಕ್ರಾಂತಿಯನ್ನು ಹಿಂದೂ ಧರ್ಮದಲ್ಲಿ ಪ್ರಮುಖ ಪರ್ವ ಎಂದು ಪರಿಗಣಿಸಲಾಗಿದೆ. ಈ ದಿನ ಪುಣ್ಯನದಿಗಳಲ್ಲಿ ಸ್ನಾನ ಮಾಡಿ, ದಾನ ಮಾಡುವುದರಿಂದ ಎಲ್ಲಾ ರೀತಿಯ ಪಾಪಗಳು ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬುದು ಧಾರ್ಮಿಕ ನಂಬಿಕೆ.
Makar Sankranti Lucky Zodiac Signs: ಮಕರ ಸಂಕ್ರಾಂತಿಯನ್ನು ಹಿಂದೂ ಧರ್ಮದಲ್ಲಿ ಪ್ರಮುಖ ಪರ್ವ ಎಂದು ಪರಿಗಣಿಸಲಾಗಿದೆ. ಈ ದಿನ ಪುಣ್ಯನದಿಗಳಲ್ಲಿ ಸ್ನಾನ ಮಾಡಿ, ದಾನ ಮಾಡುವುದರಿಂದ ಎಲ್ಲಾ ರೀತಿಯ ಪಾಪಗಳು ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬುದು ಧಾರ್ಮಿಕ ನಂಬಿಕೆ. ಮಕರ ಸಂಕ್ರಾಂತಿಯ ದಿನದಂದು ಸೂರ್ಯ ದೇವ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇಂತಹ ಪರಿಸ್ಥಿತಿಯಲ್ಲಿ, ಸೂರ್ಯನ ಈ ರಾಶಿ ಪರಿವರ್ತನೆ ಹಲವು ರಾಶಿಗಳ ಜನರ ಮೇಲೆ ಮಂಗಳಕರ ಪರಿಣಾಮವನ್ನು ಬೀರುತ್ತದೆ. ಸೂರ್ಯದೇವನ ಕೃಪೆಯಿಂದ, ಈ ದಿನ ಕೆಲವು ರಾಶಿಗಳ ಸ್ಥಳೀಯರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಉದ್ಯೋಗದಲ್ಲಿ ಬಡ್ತಿಯ ಅವಕಾಶವಿರುತ್ತದೆ. ಆ ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಇದನ್ನೂ ಓದಿ-Rahu Gochar 2023: ಮಂಗಳನ ರಾಶಿಯಲ್ಲಿ ರಾಹು ಗೋಚರ, ಈ ರಾಶಿಗಳ ಜನರ ಜೀವನದಲ್ಲಿ ಹಣದ ಸುರಿಮಳೆ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
1. ಸೂರ್ಯನ ಈ ಸಂಕ್ರಮಣ ಮಕರ ರಾಶಿಯವರಿಗೆ ಅಪಾರ ಲಾಭವನ್ನು ನೀಡಲಿದೆ. ಈ ರಾಶಿಯವರಿಗೆ ಮಕರ ಸಂಕ್ರಾಂತಿಯ ದಿನದಂದು ವಿಶೇಷ ಲಾಭಗಳು ಸಿಗಲಿವೆ. ಈ ದಿನ ನೀವು ಕೈ ಹಾಕುವ ಯಾವುದೇ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುವಿರಿ. ಪ್ರಗತಿಯ ಹೊಸ ಆಯಾಮಗಳು ತೆರೆದುಕೊಳ್ಳುತ್ತವೆ. ಹಳೆಯ ಕಾಯಿಲೆಯಿಂದ ಮುಕ್ತಿ ಸಿಗುತ್ತದೆ.
2. ಮೇಷ ರಾಶಿಯವರಿಗೆ ಮಕರ ಸಂಕ್ರಾಂತಿ ಶುಭ ಸುದ್ದಿ ತರಲಿದೆ. ಈ ದಿನ ನೀವು ಉದ್ಯೋಗದಲ್ಲಿ ಬಡ್ತಿ ಪತ್ರವನ್ನು ಪಡೆಯಬಹುದು. ಸೂರ್ಯದೇವನ ಕೃಪೆಯಿಂದ ಪ್ರತಿಯೊಂದು ಕೆಲಸವೂ ಪೂರ್ಣಗೊಳ್ಳಲಿದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸುವಿರಿ. ಕುಟುಂಬದ ಬೆಂಬಲ ಸಿಗಲಿದೆ. ಕುಟುಂಬದಲ್ಲಿ ಕೆಲ ಶುಭ ಕಾರ್ಯಗಳನ್ನು ಆಯೋಜಿಸಬಹುದು.
3. ಮಕರ ಸಂಕ್ರಾಂತಿಯಂದು ಸಿಂಹ ರಾಶಿಯವರಿಗೆ ಸೂರ್ಯನ ವಿಶೇಷ ಅನುಗ್ರಹ ಪ್ರಾಪ್ತಿಯಾಗಲಿದೆ. ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ಮತ್ತೊಂದೆಡೆ, ಕೆಲವರಿಗೆ ಕೆಲಸದಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಅತ್ಯುತ್ತಮ ಅವಕಾಶಗಳು ಸಿಗಲಿವೆ. ಶತುಗಳ ಮೇಲೆ ಜಯ ಸಾಧ್ಸಿಉವಿರಿ.ಆಮದು-ರಫ್ತಿಗೆ ಸಂಬಂಧಿಸಿದ ಜನರು ಭಾರಿ ಲಾಭವನ್ನು ಗಳಿಸುತ್ತಾರೆ.
4. ಮಕರ ಸಂಕ್ರಾಂತಿಯಂದು ವೃಶ್ಚಿಕ ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ. ಈ ಸಮಯದಲ್ಲಿ, ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ನೀವು ಅದರಲ್ಲಿ ಯಶಸ್ಸನ್ನು ಪಡೆಯುವಿರಿ. ಸರ್ಕಾರಿ ನೌಕರಿಯಲ್ಲಿರುವವರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಧೈರ್ಯ ಹೆಚ್ಚಾಗಲಿದೆ ಮತ್ತು ಪ್ರಯಾಣದಿಂದ ಲಾಭವಿದೆ.
5. ಸೂರ್ಯನ ಕೃಪೆಯಿಂದ ಕನ್ಯಾ ರಾಶಿಯವರಿಗೆ ಶುಭ ಫಲ ಪ್ರಾಪ್ತಿಯಾಗಲಿವೆ. ತಂದೆಯ ಬೆಂಬಲ ಸಿಗಲಿದೆ. ವ್ಯಾಪಾರಸ್ಥರು ಹೆಚ್ಚಿನ ಲಾಭವನ್ನು ಗಳಿಸುವರು. ಗೌರವದಲ್ಲಿ ಹೆಚ್ಚಳವಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಕರಿಗೆ ಶೀಘ್ರದಲ್ಲೇ ಯಶಸ್ಸು ಸಿಗಲಿದೆ. (ಹಕ್ಕುತ್ಯಾಗ - ಈ ಲೇಖನನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)