Sun Transit: 24 ಗಂಟೆಗಳಲ್ಲಿ ಬದಲಾಗಲಿದೆ ಈ ರಾಶಿಯವರ ಅದೃಷ್ಟ, ಒಂದು ತಿಂಗಳು ಅಪಾರ ಹಣ, ಖ್ಯಾತಿ

Surya Gochar: ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯದೇವ ನಾಳೆ (ಏಪ್ರಿಲ್ 13) ರಾಶಿ ಪರಿವರ್ತನೆ ಹೊಂದಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ತಿಂಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುವ ಸೂರ್ಯ ದೇವ ಇನ್ನೂ 24 ಗಂಟೆಗಳಲ್ಲಿ (ಏಪ್ರಿಲ್ 13) ಮೀನ ರಾಶಿಯನ್ನು ತೊರೆದು ಮೇಷ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

2 /6

ಸೂರ್ಯ ರಾಶಿ ಬದಲಾವಣೆಯ ಪ್ರ್ರಭಾವ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಇದೀಗ ನಾಳೆ ಮೇಷ ರಾಶಿಗೆ ಪ್ರವೇಶಿಸಲಿರುವ ಸೂರ್ಯದೇವ ಕೆಲವು ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳನ್ನು ತರಲಿದ್ದು, ಅವರ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.  ಆ ಅದೃಷ್ಟದ ರಾಶಿಗಳೆಂದರೆ... 

3 /6

ಸೂರ್ಯ ರಾಶಿ ಬದಲಾವಣೆಯು ವೃಷಭ ರಾಶಿಯ ಜನರಿಗೆ ವ್ಯಾಪಾರ-ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ನೀಡಲಿದ್ದಾನೆ. ದಿಢೀರ್ ಹಣಕಾಸಿನ ಲಾಭವನ್ನು ಕಾಣಬಹುದು. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. 

4 /6

ಸೂರ್ಯ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಶುಭ ಫಲಗಳನ್ನು ನೀಡಲಿದ್ದಾನೆ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಶುಭವಾರ್ತೆಯನ್ನು ಕೇಳಬಹುದು. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ. ಹೊಸ ವ್ಯವಹಾರವನ್ನು ಆರಂಭಿಸಲು ಇದು ಒಳ್ಳೆಯ ಸಮಯ. 

5 /6

ಸೂರ್ಯ ಸಂಚಾರದ ಶುಭ ಫಲಗಳು ಸಿಂಹ ರಾಶಿಯವರ ಜೀವನದ ಮೇಲೂ ಕಂಡು ಬರಲಿದೆ. ಈ ಸಮಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ಉದ್ಯೋಗಸ್ಥರಿಗೆ ಇಷ್ಟು ದಿನಗಳಿಂದ ಎದುರಾಗಿದ್ದ ವೃತ್ತಿ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. 

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.