ಈ ಗೆಡ್ಡೆ ತರಕಾರಿ ಸೇವಿಸಿದರೆ ನಾರ್ಮಲ್ ಆಗುವುದು ಬ್ಲಡ್ ಶುಗರ್!ಕ್ಯಾನ್ಸರ್ ರೋಗಿಗಳಿಗೂ ಸಂಜೀವಿನಿ ಇದು
ಕೆಲವೊಂದು ತರಕಾರಿಗಳು ಚಳಿಗಾಲದಲ್ಲಿಯೇ ಸಿಗುತ್ತದೆ. ಚಳಿಗಾಲದಲ್ಲಿ ಸಿಗುವ ಈ ತರಕಾರಿ ದೇಹದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತದೆ.
ಇಂಥಹ ಒಂದು ತರಕಾರಿ ಸುವರ್ಣ ಗೆಡ್ಡೆ. ಇದರಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ. ಅವು ನಿಧಾನವಾಗಿ ಶಕ್ತಿಯನ್ನು ಬಿಡುಗಡೆ ಮಾಡುವ ಮೂಲಕ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
ಮಧುಮೇಹ ರೋಗಿಗಳು ಯಾವ ತರಕಾರಿ ತಿನ್ನದೇ ಹೋದರೂ ಸುವರ್ಣ ಗೆಡ್ಡೆ ಮಾತ್ರ ತಿನ್ನಲೇ ಬೇಕು. ಇದು ಬ್ಲಡ್ ಶುಗರ್ ಅನ್ನು ಕಂಟ್ರೋಲ್ ನಲ್ಲಿ ಇಡಲು ಪರಿಣಾಮಕಾರಿಯಾಗಿ ಕೆಲಸ ಮಾಡುವ ತರಕಾರಿಯಾಗಿದೆ.
ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಇದು ರಕ್ತದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವುದಲ್ಲದೆ,ಕೆಟ್ಟ LDL ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
ಕ್ಯಾನ್ಸರ್ ತಡೆಗಟ್ಟಲು ಸುವರ್ಣ ಗೆಡ್ಡೆ ಅತ್ಯಂತ ಸಹಕಾರಿಯಾಗಿದೆ. ಸಂಶೋಧನೆಯೊಂದರ ಪ್ರಕಾರ, ಸುವರ್ಣ ಗೆಡ್ಡೆಯಲ್ಲಿರುವ ಅಲಾಂಟೊಯಿನ್ ಸಂಯುಕ್ತವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ.
ಸೂಚನೆ : ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ.ಇದನ್ನು ಬರೆಯುವಾಗ ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಜೀ ನ್ಯೂಸ್ ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.