Surya Gochar 2024: ವರ್ಷದ ಬಳಿಕ ಮೀನ ರಾಶಿಗೆ ಸೂರ್ಯನ ಪ್ರವೇಶ, ಈ ಜನರ ಜೀವನದಲ್ಲಿ ಆಕಸ್ಮಿಕ ಧನಲಾಭದಿಂದ ಗೋಲ್ಡನ್ ಟೈಮ್ ಆರಂಭ!
Surya Gochar 2024: Surya Meen Rashi Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯನ ಮೀನ ರಾಶಿ ಗೋಚರ ನೆರೆವೆರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗುವ ಸಂಕೇತಗಳಿವೆ. (Spiritual News In Kannada)
ಮಿಥುನ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ನಿಮಗೆ ಭಾರಿ ಯಶಸ್ಸು ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ನಿಮಗೆ ನಿಮ್ಮ ಪ್ರತಿಷ್ಠೆಯ ಲಾಭ ಸಿಗಲಿದೆ. ನೌಕರಿಯಲ್ಲಿ ನಿಮಗೆ ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹನ ಹಾಗೂ ಲಾಭ ಸಿಗಲಿದೆ. ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಅವಧಿಯಲ್ಲಿ ಸಾಕಷ್ಟು ಯಶಸ್ಸು ಸಿಗಲಿದೆ. ಸ್ಥಾನಮಾನ ಕೂಡ ಪ್ರಾಪ್ತಿಯಾಗಲಿದೆ. ವ್ಯಾಪಾರ ವರ್ಗದ ಜನರಿಗೂ ಕೂಡ ಉತ್ತಮ ಧನಲಾಭ ಕಾದಿದೆ. ಹೊಸ ಕಾರ್ಯ ಆರಂಭಕ್ಕೆ ಇದು ಅತ್ಯಂತ ಒಳ್ಳೆಯ ಸಮಯ ಎಂದರೆ ತಪ್ಪಾಗಲಾರದು,
ಕರ್ಕ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಭಾಗ್ಯೋದಯ ಬಹುತೇಕ ಪಕ್ಕಾ ಎಂದರೆ ತಪ್ಪಾಗಲಾರದು. ನೀವು ಅಂದುಕೊಂಡ ಯೋಜನೆಗಳನ್ನು ನೀವು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಅವು ನಿಮಗೆ ಶುಭ ಫಲಗಳನ್ನು ನೀಡಲಿವೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಸುಖ ನೀಡುವ ಕೆಲ ಸಮಾಚಾರಗಳು ನಿಮಗೆ ಪ್ರಾಪ್ತಿಯಾಗಲಿವೆ. ದೂರದ ಪ್ರಯಾಣ ಜರುಗುವ ಸಾಧ್ಯತೆ ಇದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ.
ಧನು ರಾಶಿ: ಈ ಅವಧಿಯಲ್ಲಿ ಸೂರ್ಯದೇವ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ವಾಹನ ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಕಾರ್ಯಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಸಂಪತ್ತಿನ ಮೂಲಕ ಕೂಡ ನಿಮಗೆ ಅಪಾರ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಪೋಷಕರ ಅಪಾರ ಬೆಂಬಲ ಕೂಡ ಸಿಗಲಿದೆ. ಧನ ಪ್ರಾಪ್ತಿಯ ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ
ವೃಷಭ ರಾಶಿ:ಈ ಅವಧಿಯಲ್ಲಿ ಸೂರ್ಯ ನಿಮ್ಮ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ, ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಂಡು ನೀವು ಹಣ ಸಂಪಾದಿಸುವಲ್ಲಿ ಯಶಸ್ವಿಯಾಗುವಿರಿ. ಇದರಿಂದ ನಿಮ್ಮ ಜೀವನದಲ್ಲಿ ಸುಖ ಹೆಚ್ಚಾಗಲಿದೆ. ಕೆಲಸ ಕಾರ್ಯಗಳಲಿಯೂ ಕೂಡ ಶುಭ ಪರಿಣಾಮಗಳು ಪ್ರಾಪ್ತಿಯಾಗಲಿವೆ. ಮನಸೋಇಚ್ಛೆ ಉನ್ನತಿಯಾಗಲಿದೆ. ಹಳೆ ಹೂಡಿಕೆಗಳಿಂದಲೂ ಕೂಡ ನಿಮಗೆ ಲಾಭ ಸಿಗುವ ಸಾಧ್ಯತೆ ಇದೆ. ಮಕ್ಕಳ ಕಡೆಯಿಂದ ಒಳ್ಳೆ ಸುದ್ದಿ ಸಿಗಲಿದೆ.
ಕನ್ಯಾ ರಾಶಿ: ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಸೂರ್ಯ ಸಂಚರಿಸಲಿದ್ದಾನೆ. ಹೀಗಾಗಿ ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಸಂಗಾತಿಯ ಜೊತೆಗೆ ಒಳ್ಳೆಯ ಸಮತೋಲನವನ್ನು ನೀವು ಸಾಧಿಸುವಿರಿ. ಪಾಟ್ನರ್ ಶಿಪ್ ನಲ್ಲಿ ಕೆಲಸ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ. ಧನ ಲಾಭದ ಉತ್ತಮ ಯೋಗಗಳು ರಚನೆಯಾಗುತ್ತಿವೆ. ಇದರಲ್ಲಿ ನಿಮಗೆ ನಿಮ್ಮ ಸಂಗಾತಿಯ ಅಪಾರ ಬಂಬಲ ಸಿಗಲಿದೆ. ಸೂರ್ಯ ನಿಮ್ಮ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇದರಿಂದ ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ.
ಕುಂಭ ರಾಶಿ: ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಸೂರ್ಯನ ಈ ಗೋಚರ ನೆರವೇರಲಿದೆ. ಇದರಿಂದ ನಿಮಗೆ ಈ ಅವಧಿಯಲ್ಲಿ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ವೃತ್ತಿ ಜೀವನದಲ್ಲಿ ಸಾಕಷ್ಟು ಸಕಾರಾತ್ಮಕ ಪ್ರರಿಣಾಮಗಳು ನೋಡಲು ಸಿಗಲಿದೆ. ಆಕಸ್ಮಿಕವಾಗಿ ಎಲ್ಲಿಂದಲೋ ಹಣ ಬಂದ ಸುದ್ದಿ ನಿಮಗೆ ಸಿಗಲಿದೆ. ಇದೇ ವೇಳೆ ನಿಮ್ಮ ಆತ್ಮವಿಶ್ವಾಸದಲ್ಲಿಯೂ ಕೂಡ ಅಪಾರ ವೃದ್ಧಿಯಾಗಲಿದೆ. ಮಾತಿನಲ್ಲಿಯೂ ಕೂಡ ಪ್ರಭಾವ ಹೆಚ್ಚಾಗಿ ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಸೂರ್ಯ ನಿಮ್ಮ ಜಾತಕದ ಸಪ್ತಮ ಭಾವಕ್ಕೆ ಅಧಿಪತಿಯಾದ ಕಾರಣ ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)