Surya Grahan 2024: ವರ್ಷದ ಮೊದಲ ಸೂರ್ಯಗ್ರಹಣದಿಂದ ಈ 3 ರಾಶಿಯವರ ಬದುಕೇ ಬಂಗಾರ

Surya Grahan 2024: ಮೊನ್ನೆ ಮೊನ್ನೆಯಷ್ಟೇ ವರ್ಷದ ಮೊದಲ ಚಂದ್ರಗ್ರಹಣ ಮುಗಿದಿದೆ. ಇನ್ನೂ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬಕ್ಕೂ ಮೊದಲು ಈ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಗ್ರಹಣಗಳು ಖಗೋಳ ವಿಸ್ಮಯಗಳೇ ಆದರೂ ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಸೂರ್ಯ-ಚಂದ್ರ ಗ್ರಹಣಗಳಿಗೆ ಬಹಳ ಮಹತ್ವವಿದೆ. ಇದೀಗ ಯುಗಾದಿ ಹಬ್ಬಕ್ಕೂ ಮೊದಲು ಎಂದರೆ 08 ಏಪ್ರಿಲ್ 2024ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. 

2 /6

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಆತ್ಮದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ, ಸೂರ್ಯನಿಗೆ ಸಂಬಂಧಿಸಿದ ಯಾವುದೇ ಸಣ್ಣ ಘಟನೆಗಳು ಕೂಡ ದೇಶ-ಪ್ರಪಂಚದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. 

3 /6

ಸೂರ್ಯ ಗ್ರಹಣದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರಲಿದೆ. ಆದರೂ, ಈ ಸಮಯವನ್ನು ಮೂರು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

2024ರ ಮೊದಲ ಸೂರ್ಯಗ್ರಹಣವು ವೃಷಭ ರಾಶಿಯ ಜನರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಅವಧಿಯಲ್ಲಿ ಹಠಾತ್ ಧನಲಾಭದಿಂದ ಬಾಕಿ ಉಳಿದಿರುವ ಸಾಲಗಳನ್ನು ಪಾವಟಿಸುವಿರಿ. ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. 

5 /6

ಸೂರ್ಯ ಗ್ರಹಣವು ಮಿಥುನ ರಾಶಿಯ ಜನರಿಗೆ ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಉನ್ನತ ವಿದ್ಯಾಭ್ಯಾಸ ಅಥವಾ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವವರಿಗೆ ಇದು ಒಳ್ಳೆಯ ಸಮಯ. ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. 

6 /6

ಈ ವರ್ಷದ ಮೊದಲ ಸೂರ್ಯಗ್ರಹಣವು ಕರ್ಕಾಟಕ ರಾಶಿಯ ಜನರಿಗೆ ಶುಭ ಫಲಗಳನ್ನು ನೀಡಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಜೀವನದಲ್ಲಿ ಸಂತೋಷದ ಕ್ಷಣಗಳು ಹೆಚ್ಚಾಗಲಿವೆ. ಉದ್ಯೋಗ ರಂಗದಲ್ಲಿಯೂ ಮನ್ನಣೆ ಸಿಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.