Surya Grahan 2024: ವರ್ಷದ ಮೊದಲ ಸೂರ್ಯಗ್ರಹಣದಿಂದ ಈ 3 ರಾಶಿಯವರ ಬದುಕೇ ಬಂಗಾರ

Wed, 27 Mar 2024-6:54 am,

ಗ್ರಹಣಗಳು ಖಗೋಳ ವಿಸ್ಮಯಗಳೇ ಆದರೂ ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಸೂರ್ಯ-ಚಂದ್ರ ಗ್ರಹಣಗಳಿಗೆ ಬಹಳ ಮಹತ್ವವಿದೆ. ಇದೀಗ ಯುಗಾದಿ ಹಬ್ಬಕ್ಕೂ ಮೊದಲು ಎಂದರೆ 08 ಏಪ್ರಿಲ್ 2024ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. 

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಆತ್ಮದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ, ಸೂರ್ಯನಿಗೆ ಸಂಬಂಧಿಸಿದ ಯಾವುದೇ ಸಣ್ಣ ಘಟನೆಗಳು ಕೂಡ ದೇಶ-ಪ್ರಪಂಚದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. 

ಸೂರ್ಯ ಗ್ರಹಣದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರಲಿದೆ. ಆದರೂ, ಈ ಸಮಯವನ್ನು ಮೂರು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

2024ರ ಮೊದಲ ಸೂರ್ಯಗ್ರಹಣವು ವೃಷಭ ರಾಶಿಯ ಜನರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಅವಧಿಯಲ್ಲಿ ಹಠಾತ್ ಧನಲಾಭದಿಂದ ಬಾಕಿ ಉಳಿದಿರುವ ಸಾಲಗಳನ್ನು ಪಾವಟಿಸುವಿರಿ. ದೀರ್ಘ ಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. 

ಸೂರ್ಯ ಗ್ರಹಣವು ಮಿಥುನ ರಾಶಿಯ ಜನರಿಗೆ ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಉನ್ನತ ವಿದ್ಯಾಭ್ಯಾಸ ಅಥವಾ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವವರಿಗೆ ಇದು ಒಳ್ಳೆಯ ಸಮಯ. ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. 

ಈ ವರ್ಷದ ಮೊದಲ ಸೂರ್ಯಗ್ರಹಣವು ಕರ್ಕಾಟಕ ರಾಶಿಯ ಜನರಿಗೆ ಶುಭ ಫಲಗಳನ್ನು ನೀಡಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಜೀವನದಲ್ಲಿ ಸಂತೋಷದ ಕ್ಷಣಗಳು ಹೆಚ್ಚಾಗಲಿವೆ. ಉದ್ಯೋಗ ರಂಗದಲ್ಲಿಯೂ ಮನ್ನಣೆ ಸಿಗಲಿದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link