ಮಂಗಳನ ರಾಶಿಯಲ್ಲಿ ತ್ರಿಗ್ರಹಿ ಯೋಗ ರಚನೆ, ಧನಲಕ್ಷ್ಮಿಯ ಕೃಪೆಯಿಂದ ಈ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಯೋಗ!

Sat, 09 Dec 2023-4:32 pm,

Surya-Magal-Shashi Yuti In Scorpio 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯಂತೆ ಮಂಗಳ ವೃಶ್ಚಿಕ ರಾಶಿಗೂ ಅಧಿಪತಿಯಾಗಿದ್ದಾನೆ. ವೃಶ್ಚಿಕ ರಾಶಿಯಲ್ಲಿ ಸೂರ್ಯ ಚಂದ್ರರ ಮೈತ್ರಿಯಿಂದ ತ್ರಿಗ್ರಹಿ ಯೋಗ ರಚನೆಯಾಗಿದೆ, ಇದರಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. (Spiritual News In Kannada)

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ಈ ಜಾತಕದ ಜನರಿಗೆ ವಿಶೇಷ ಲಾಭ ಸಿಗಲಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಈ ಯೋಗ ಉತ್ತಮವಾಗಿರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರು ಉತ್ತಮ ಸಾಧನೆ ಮಾಡುವರು. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಸರ್ಕಾರಿ ನೌಕರಿಯ ಹುಡುಕಾಟಕ್ಕೆ ತೆರೆಬೀಳಲಿದೆ. ಶತ್ರುಗಳ ಮೇಲೆ ಜಯ ಸಾಧಿಸುವಿರಿ. ನಿಮ್ಮ ಜೀವನದಲ್ಲಿ ಖುಷಿಗಳು ಕದ ತಟ್ಟಲಿವೆ. ಹೂಡಿಕೆಗೆ ಈ ಸಮಯ ಉತ್ತಮವಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿದಂತೆ ಎಚ್ಚರಿಕೆವಹಿಸುವ ಅವಶ್ಯಕತೆ ಇದೆ. ವೈವಾಹಿಕ ಜೀವನ-ಲವ್ ಲೈಫ್ ಉತ್ತಮವಾಗಿರಲಿದೆ. (Spiritual News In Kannada)

ಕನ್ಯಾ ರಾಶಿ: ನಿಮ್ಮ ಜಾತಕದ ತೃತೀಯ ಭಾವದಲ್ಲಿಯೂ ಕೂಡ ಈ ಯೋಗ ರೂಪುಗೊಳ್ಳುತ್ತಿದೆ. ಈ ಯೋಗದ ಸಕಾರಾತ್ಮಕ ಪ್ರಭಾವ ನಿಮಗೆ ನೋಡಲು ಸಿಗಲಿದೆ. ವೃತ್ತಿ ಜೀವನದಲ್ಲಿಯೂ ಕೂಡ ವೃದ್ಧಿಯಾಗಲಿದೆ. ವೇತನ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಂಪೋರ್ಟ್ ಬಿಸ್ನೆಸ್ ಗೆ ಸಂಬಂಧಿದಂತೆ ಲಾಭ ನಿಮ್ಮದಾಗಲಿದೆ. ಕುಟುಂಬದ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಲಾಭ ಸಿಗಲಿದೆ. ಕೆಲಸದ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. 

ವೃಶ್ಚಿಕ ರಾಶಿ: ನಿಮ್ಮ ಜಾತಕದ ಲಗ್ನ ಭಾವದಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ-ಸಾಹಸ ಹೆಚ್ಚಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರಿಗೆ ಯಶಸ್ಸು ಸಿಗಲಿದೆ. ಕಾನೂನು ಪ್ರಕರಣಗಳಲ್ಲಿ ಮಂಗಳ ನಿಮಗೆ ಯಶಸ್ಸನ್ನು ದಯಪಾಲಿಸಲಿದ್ದಾನೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಪ್ರತಿಷ್ಠೆ ಕೂಡ ಪ್ರಾಪ್ತಿಯಾಗಲಿದೆ. ಎಲ್ಲರೂ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಬಿಸ್ನೆಸ್ ಆರಂಭಿಸಲು ಯೋಚಿಸುತ್ತಿದ್ದರೆ ಇದು ಸಕಾಲವಾಗಿದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link