ಬ್ಯಾಕ್ ಟು ಬ್ಯಾಕ್ ದಾಖಲೆ ನಿರ್ಮಿಸಿ ‘King of 2022’ ಎನಿಸಿಕೊಂಡ ಸ್ಟಾರ್ ಆಟಗಾರ ಇವರೇ!

Tue, 06 Dec 2022-9:25 am,

ಸೂರ್ಯಕುಮಾರ್ ಯಾದವ್ 2022 ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಈ ವರ್ಷ ಅವರು 31 ಇನ್ನಿಂಗ್ಸ್‌ಗಳಲ್ಲಿ 46.56 ಸರಾಸರಿ ಮತ್ತು 187.43 ಸ್ಟ್ರೈಕ್ ರೇಟ್‌ನಲ್ಲಿ 1,164 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್‌ನಿಂದ 9 ಅರ್ಧ ಶತಕ ಮತ್ತು 2 ಶತಕಗಳು ಹೊರಬಂದಿವೆ.

ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಉಳಿದಿದ್ದಾರೆ. ಇದರೊಂದಿಗೆ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಸದ್ಯಕ್ಕೆ ಟಿ20 ಕ್ರಿಕೆಟ್‌ನಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

ಸೂರ್ಯಕುಮಾರ್ ಯಾದವ್ ಇತ್ತೀಚೆಗೆ ನ್ಯೂಜಿಲೆಂಡ್ ಪ್ರವಾಸದಲ್ಲಿ ಶತಕ ಬಾರಿಸಿದ್ದರು. ಸರಣಿಯ ಎರಡನೇ T20 ಪಂದ್ಯದಲ್ಲಿ 51 ಎಸೆತಗಳಲ್ಲಿ 111 ರನ್‌ಗಳ ಅಜೇಯ ಇನ್ನಿಂಗ್ಸ್‌ಗಳನ್ನು ಆಡಿದರು. ನ್ಯೂಜಿಲೆಂಡ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಸೂರ್ಯಕುಮಾರ್ ಯಾದವ್ ಅವರು ವಿರಾಟ್ ಕೊಹ್ಲಿಯ ಬಳಿಕ ಒಂದು ವರ್ಷದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಎನಿಸಿಕೊಂಡ ಆಟಗಾರನಾಗಿದ್ದಾರೆ. ಕೊಹ್ಲಿ 2016 ರಲ್ಲಿ 6 ಬಾರಿ ಪಂದ್ಯಶ್ರೇಷ್ಠರಾಗಿದ್ದಾರೆ. ಆದರೆ ಸೂರ್ಯಕುಮಾರ್ ಈ ವರ್ಷ 7 ಬಾರಿ ಪಂದ್ಯಶ್ರೇಷ್ಠರಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ವರ್ಷ ಅವರು ಒಟ್ಟು 68 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೊದಲು ಈ ದಾಖಲೆ ಮುಹಮ್ಮದ್ ವಾಸಿಂ ಹೆಸರಿನಲ್ಲಿತ್ತು. ಕ್ಯಾಲೆಂಡರ್ ವರ್ಷದಲ್ಲಿ ಅವರು 43 ಸಿಕ್ಸರ್‌ಗಳನ್ನು ಬಾರಿಸಿದ್ದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link