T20 World Cup: ಇಲ್ಲಿಯವರೆಗೆ ಟಿ20 ವಿಶ್ವಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ತಂಡಗಳಿವು
2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಟಿ20 ವಿಶ್ವಕಪ್‌ನ ಮೊದಲ ಋತುವನ್ನು ಆಡಲಾಯಿತು. ಈ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ 5 ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.
2009ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಪಾಕಿಸ್ತಾನ ಪ್ರಶಸ್ತಿ ಗೆದ್ದಿತ್ತು. ಫೈನಲ್‌ನಲ್ಲಿ ಪಾಕಿಸ್ತಾನ 8 ವಿಕೆಟ್‌ಗಳಿಂದ ಗೆದ್ದಿತ್ತು. ಅದೇ ಸಮಯದಲ್ಲಿ ಶ್ರೀಲಂಕಾ ಪರ ತಿಲಕರತ್ನೆ ದಿಲ್ಶಾನ್ ಇಡೀ ಟೂರ್ನಿಯಲ್ಲಿ 317 ರನ್ ಗಳಿಸಿ ಎಲ್ಲರ ಮನ ಗೆದ್ದಿದ್ದರು.
2010ರಲ್ಲಿ ಆಸ್ಟ್ರೇಲಿಯವನ್ನು ಸೋಲಿಸಿ ಇಂಗ್ಲೆಂಡ್ ಟಿ20 ವಿಶ್ವಕಪ್ ಗೆದ್ದಿತ್ತು. ಅಂತಿಮ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇಂಗ್ಲೆಂಡ್ ಪರ ಕೆವಿನ್ ಪೀಟರ್ಸನ್ ಟೂರ್ನಿಯುದ್ದಕ್ಕೂ ಅಮೋಘ ಆಟ ಪ್ರದರ್ಶಿಸಿದರು.
ವೆಸ್ಟ್ ಇಂಡೀಸ್ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿದೆ. ಈ ತಂಡ 2012ರಲ್ಲಿ ಶ್ರೀಲಂಕಾವನ್ನು ಸೋಲಿಸಿತ್ತು. ಅದೇ ಸಮಯದಲ್ಲಿ, 2016 ರಲ್ಲಿ ವೆಸ್ಟ್ ಇಂಡೀಸ್, ಕ್ರಿಕೆಟ್ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಇಂಗ್ಲೆಂಡ್ ಅನ್ನು ಸೋಲಿಸಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
2014 ರ ಟಿ20 ವಿಶ್ವಕಪ್ ಅನ್ನು ಬಾಂಗ್ಲಾದೇಶ ಆಯೋಜಿಸಿತ್ತು. ಬಾಂಗ್ಲಾದೇಶದ ಪಿಚ್‌ಗಳು ಯಾವಾಗಲೂ ಸ್ಪಿನ್ನರ್‌ಗಳಿಗೆ ಬೆಂಬಲ ನೀಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ಮತ್ತು ಭಾರತ ನಡುವೆ ಫೈನಲ್ ಪಂದ್ಯ ನಡೆಯಿತು. ಅಲ್ಲಿ ಶ್ರೀಲಂಕಾ 6 ವಿಕೆಟ್‌ಗಳಿಂದ ಟಿ20 ವಿಶ್ವಕಪ್ ಪಂದ್ಯವನ್ನು ತನ್ನದಾಗಿಸಿಕೊಂಡಿತು.
2021ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾದ ನೆಲದಲ್ಲಿ ನಡೆದಿತ್ತು. ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿತು.