ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ರಾತ್ರಿ ಮಲಗುವ ಮುನ್ನ ಈ ಕೆಲಸ ಮಾಡಿ

ಹೈ ಬಿಪಿ ಅನಾರೋಗ್ಯಕರ ಜೀವನಶೈಲಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಒಂದಾಗಿದೆ.  ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹೃದಯಾಘಾತ, ಪಾರ್ಶ್ವವಾಯು, ಮುಂತಾದ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. 

Healthy Lifestyle Habits For BP Control: ಅಧಿಕ ರಕ್ತದೊತ್ತಡ ಪ್ರಪಂಚದಾದ್ಯಂತ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್‌ನ ಮಾಹಿತಿಯ ಪ್ರಕಾರ, ಯುಎಸ್‌ನಲ್ಲಿ 10 ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.  ಹೈ ಬಿಪಿ ಅನಾರೋಗ್ಯಕರ ಜೀವನಶೈಲಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಒಂದಾಗಿದೆ.  ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹೃದಯಾಘಾತ, ಪಾರ್ಶ್ವವಾಯು, ಮುಂತಾದ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಉತ್ತಮ ಜೀವನಶೈಲಿ, ಸಮತೋಲಿತ ಆಹಾರ ಮತ್ತು ಕೆಲವು ಆರೋಗ್ಯ-ಸಂಬಂಧಿತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದುರಿಂದ ಹೈ ಬಿಪಿಯಂತಹ ರೋಗಗಳನ್ನು ಸುಲಭವಾಗಿ ನಿಯಂತ್ರಿಸಬಹುದು

2 /4

ನ್ಯಾಷನಲ್ ಹಾರ್ಟ್, ಲಂಗ್ ಮತ್ತು ಬ್ಲಡ್ ಇನ್ಸ್ಟಿಟ್ಯೂಟ್ ಪ್ರಕಾರ,  ಡ್ಯಾಶ್ ಡಯಟ್ ಅನುಸರಿಸುವುದು ಅಧಿಕ ರಕ್ತದೊತ್ತಡ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. DASH ಡಯಟ್ ವಿಶೇಷವಾಗಿ  ಅಧಿಕ ರಕ್ತದೊತ್ತಡ ರೋಗಿಗಳಿಗೆ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಲಾಗಿದೆ. ಈ ರೀತಿಯ ಆಹಾರವನ್ನು ಸೇವಿಸುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು. ತಾಜಾ ಹಣ್ಣುಗಳು ಮತ್ತು ತರಕಾರಿಗಳ ಜೊತೆಗೆ ಒಣ ಹಣ್ಣುಗಳನ್ನು ಸೇವಿಸುವುದು ಕೂಡಾ ಪ್ರಯೋಜನಕಾರಿಯಾಗಿರಲಿದೆ.  

3 /4

ಅಧಿಕ ಬಿಪಿ ರೋಗಿಗಳು ತಮ್ಮ ಆಹಾರದಲ್ಲಿ ಸೋಡಿಯಂ ಪ್ರಮಾಣವನ್ನು ಕಡಿಮೆ ಮಾಡಬೇಕು. ಕಡಿಮೆ ಉಪ್ಪನ್ನು ತಿನ್ನುವುದರಿಂದ ರಕ್ತದೊತ್ತಡದ ಮಟ್ಟವನ್ನು ನಿರ್ವಹಿಸಲು ಸುಲಭವಾಗುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ನಿತ್ಯ  1,500 ಮಿಗ್ರಾಂ ಸೋಡಿಯಂ ಸೇವಿಸಿದರೆ ಸಾಕಾಗುತ್ತದೆ.    

4 /4

ಅಧಿಕ ರಕ್ತದೊತ್ತಡ ರೋಗಿಗಳಿಗೆ ಹಾಲು ಮತ್ತು ಡೈರಿ ಉತ್ಪನ್ನಗಳ ಸೇವನೆಯು ಪ್ರಯೋಜನಕಾರಿಯಾಗಿದೆ. ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲನ್ನು ಸೇವಿಸುವುದು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ.