Tea For Sugar Control: ಇತ್ತೀಚಿನ ದಿನಗಳಲ್ಲಿ ಜನರು ವಯಸ್ಸಿನ ಭೇದವಿಲ್ಲದೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣ ಮಾಡದೆ ಇದ್ದರೆ, ಅದು ನಿಮ್ಮ ದೇಹದ ಮತ್ತಿತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ನಂತರ ನಿಮಗೆ ಹೃದ್ರೋಗ ಹಾಗೂ ಕಿಡ್ನಿ ಸಂಬಂಧಿತ ಸಮಸ್ಯೆಗಳು ಕೂಡ ಎದುರಾಗಬಹುದು.

ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬೇಕು. ಇದಕ್ಕಾಗಿ ನೀವು ಕೆಲವು ಪಾನಿಯಾಗಳನ್ನು ಕುಡಿಯಬೇಕು.
ನೈಸರ್ಗಿಕ ಪಾನಿಯಾಗಳನ್ನು ಕುಡಿಯುವುದರಿಂದ ನಿಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನೀವು ಕಂಟ್ರೋಲ್‌ನಲ್ಲಿಡಬಹುದು. ಈ ಪಾನಿಯಾಗಳನ್ನು ಸೇವಿಸುವುದರಿಂದ ನೀವು ನಿಮ್ಮ ದೇಹದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ.
ಈ ಪುದೀನಾ ಟೀ ಕೂಡ ಕೆಫೀನ್ ಮುಕ್ತವಾಗಿದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ. ಈ ಚಹಾವನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಷ್ಟೆ ಅಲ್ಲ ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.
ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಶುಂಠಿಯನ್ನು ಬಳಸಿ ಟೀ ಮಾಡಿ ಸೇವಿಸುವುದರಿಂದ, ನಿಮ್ಮ ಜೀರ್ಣಕಾರಿ ಸಮಸ್ಯೆ ಹೆಚ್ಚಾಗುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ. ಇದರಿಂದಾಗಿ ಸಕ್ಕರೆ ಕಾಯಿಲೆ ಇರುವವರು ಈ ಚಹಾವನ್ನು ಯಾವುದೇ ಭಯವಿಲ್ಲದೆ ಸೇವಿಸಬಹುದು.
ದಾಲ್ಚಿನ್ನಿ ನಮ್ಮ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುವ ಗುಣಗಳನ್ನು ಹೊಂದಿದೆ. ಅವು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬ್ಲಾಕ್ ಟೀ ಕೂಡ ನಿಮ್ಮ ಸಕ್ಕರೆಯನ್ನು ನಿಯಂತ್ರಣದಲ್ಲಿಡುವಲ್ಲಿ ಸಾಕಷ್ಟು ಸಹಾಯ ಮಾಡುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಇರುವುದರಿಂದ ನಿಮ್ಮ ದೇಹದಲ್ಲಿನ ಶುಗರ್ ಹೆಚ್ಚಾಗದಂತೆ ಇದು ಕಾಪಾಡುತ್ತದೆ.
ಆ್ಯಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಗ್ರೀನ್ ಟೀ ನಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ಕಂಟ್ರೋಲ್‌ನಲ್ಲಿಡಲು ಸಹಾಯ ಮಾಡುತ್ತದೆ. ಇದು ಇನ್ಸುಲಿನ್ ಸೆನ್ಸಿಟಿವಿಟಿ ಸುಧಾರಿಸಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.