ಬೆಂಗಳೂರಿನಲ್ಲಿ ಟೀಂ ಇಂಡಿಯಾ ದೀಪಾವಳಿ ಸೆಲೆಬ್ರೇಷನ್: ಕಲರ್ಫುಲ್ ಡ್ರೆಸ್’ನಲ್ಲಿ ಆಟಗಾರರು ಮಿಂಚಿಂಗೋ ಮಿಂಚಿಂಗ್! ಫೋಟೋಸ್

Sun, 12 Nov 2023-12:49 pm,

ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ಇನ್ನು ಟೀಂ ಇಂಡಿಯಾದ ಆಟಗಾರರು ಸಹ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ದೀಪಾವಳಿ ಹಬ್ಬ ಆಚರಣೆ ಮಾಡಿದ್ದಾರೆ.

ದೀಪಾವಳಿಯ ಮುನ್ನಾ ದಿನದಂದು ಮೆನ್ ಇನ್ ಬ್ಲೂ ತಂಡ ಒಟ್ಟಿಗೆ ಹಬ್ಬ ಆಚರಣೆ ಮಾಡಿದೆ. ಬೆಂಗಳೂರಿನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದು, ಆ ಸುಂದರ ಕ್ಷಣಗಳ ಫೋಟೋಗಳನ್ನು ಇಲ್ಲಿ ಕಾಣಬಹುದು.

ಟೀಂ ಇಂಡಿಯಾ ಕಫ್ತಾನ ರೋಹಿತ್ ಶರ್ಮಾ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ಅಂದಹಾಗೆ ಪತ್ನಿ ರಿತಿಕಾ ಸಜ್ದೇಹ್ ಜೊತೆ ಫೋಟೋಗೆ ಫೋಸ್ ಕೊಟ್ಟಿದ್ದು, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ಕೂಡ ದೀಪಾವಳಿ ಪಾರ್ಟಿಯಲ್ಲಿ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ಶುಭ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಕೂಡ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ಆ ಫೋಟೋಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ.

ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ಸಂಭ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link