IND Vs AUS: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾ ತಂಡಕ್ಕೆ ಬಿಗ್ ಶಾಕ್..!
IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
ಗಾಯದ ತೀವ್ರತೆ ಎಷ್ಟಿದೆ ಎಂಬುದು ಗೊತ್ತಾಗಿಲ್ಲ ಆದರೆ ಫೋಟೋ ನೋಡಿದರೆ ಕುತ್ತಿಗೆ ನೋವಿನಿಂದ ನರಳುತ್ತಿರುವಂತೆ ಕಾಣುತ್ತಿದೆ. ಇದರಿಂದಾಗಿ ನವೆಂಬರ್ 22 ರಿಂದ ಪರ್ತ್‌ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ.
ಆರಂಭಿಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಮಗಳ ಜನನದಿಂದಾಗಿ ಆಟದಿಂದ ದೂರ ಉಳಿದಿದ್ದಾರೆ. ಶುಭಮನ್ ಗಿಲ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
ಇದೀಗ ಜೈಸ್ವಾಲ್ ಕೂಡ ಗಾಯದ ಸಮಸ್ಯೆಯಿಂದ ಟೆಸ್ಟ್ ಪಂದ್ಯದಿಂದ ದೂರ ಉಳಿದರೆ ಓಪನರ್ ಗಳಾಗಿ ಯಾರು ಬರುತ್ತಾರೆ ಎಂಬುದು ಅನುಮಾನ ಶುರುವಾಗಿದೆ.
ಜೈಸ್ವಾಲ್ ಫಿಟ್ ಆಗಿದ್ದರೆ ಮಾತ್ರ ಅವರನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಈಗ ಗೈರುಹಾಜರಾಗಿರುವುದರಿಂದ ಅವರ ಸ್ಥಾನಕ್ಕೆ ರಾಹುಲ್ ಮತ್ತು ಪಡಿಕ್ಕಲ್ ಬರಲಿದ್ದಾರೆ.
ಒಂದು ವೇಳೆ ಜೈಸ್ವಾಲ್ ಫಿಟ್ ಆಗಿದ್ದರೆ ಅವರು ಹಾಗೂ ರಾಹುಲ್ ಓಪನರ್ ಆಗುವ ಸಾಧ್ಯತೆ ಇದೆ. ಹಾಗಾಗದೇ ಇದ್ದರೆ ಟೀಮ್ ಮ್ಯಾನೇಜ್ ಮೆಂಟ್ ಏನು ಮಾಡುತ್ತೋ ನೋಡೋಣ.
ಟೀಂ ಇಂಡಿಯಾದ ಮೊದಲ ಪಂದ್ಯದಲ್ಲಿ ಹಿರಿಯ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಜೈಸ್ವಾಲ್ ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವಷ್ಟು ಫಿಟ್ ಆಗುತ್ತಾರೆ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಸದ್ಯ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದೆ.
ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಧ್ರುವ ಜುರೆಲ್, ನಿತೀಶ್ ರೆಡ್ಡಿ, ಅಶ್ವಿನ್, ಬುಮ್ರಾ, ಸಿರಾಜ್ ಮತ್ತು ಆಕಾಶ್ ದೀಪ್ ಅಂತಿಮ ಭಾರತೀಯ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.