ಇಂಗ್ಲೆಂಡ್ ಪಂದ್ಯಕ್ಕೆ Playing 11 ಪ್ರಕಟಿಸಿದ ಟೀಂ ಮ್ಯಾನೇಜ್ಮೆಂಟ್: ಹಾರ್ದಿಕ್, ಸೂರ್ಯ ಔಟ್-ಈ ಸ್ಪಿನ್ ಮಾಂತ್ರಿಕನಿಗೆ ಚ್ಯಾನ್ಸ್
ಮುಂದಿನ ಪಂದ್ಯ ಇಂಗ್ಲೆಂಡ್ ವಿರುದ್ಧ ಅಕ್ಟೋಬರ್ 29ರಂದು ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಸಂಭಾವ್ಯ ಪ್ಲೇಯಿಂಗ್ 11 ಪ್ರಕಟವಾಗಿದ್ದು, ಇದರಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯ ಕುಮಾರ್ ಯಾದವ್ ಸ್ಥಾನ ಪಡೆಯುವುದು ಅನುಮಾನವಾಗಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನೂ ಚೇತರಿಸಿಕೊಂಡಿಲ್ಲ. ಈ ಕಾರಣದಿಂದಾಗಿ ಮುಂದಿನ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧದ ಪಂದ್ಯ ಸೇರಿ, ಮುಂದಿನ 3 ಪಂದ್ಯಗಳಿಗೂ ಪಾಂಡ್ಯ ಲಭ್ಯವಾಗುವುದು ಕಷ್ಟ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಹಾರ್ದಿಕ್ ಬದಲಿ ಸ್ಥಾನವನ್ನು ನೀಡಲಾಗಿತ್ತು. ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳದ ಯಾದವ್, ಇಂಗ್ಲೆಂಡ್ ವಿರುದ್ಧದ ಪ್ಲೇಯಿಂಗ್ 11ನಿಂದ ಹೊರಗುಳಿಯಲಿದ್ದಾರೆ.
ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್’ರಿಗೆ ಸ್ಥಾನ ನೀಡುವ ಬಗ್ಗೆ ಟೀಂ ಮ್ಯಾನೇಜ್ಮೆಂಟ್ ಚಿಂತಿಸಿದೆ. ಲಕ್ನೋದ ಏಕನಾ ಮೈದಾನವು ಸ್ಪಿನ್ ಸ್ನೇಹಿಯಾಗಿದೆ. ಇದೇ ಕಾರಣದಿಂದ ಹೆಚ್ಚುವರಿ ಬ್ಯಾಟರ್ ಬದಲಿಗೆ ಸ್ಪಿನ್ನರ್’ಗಳನ್ನು ಕಣಕ್ಕಿಳಿಸಲು ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಆಫ್ ಸ್ಪಿನ್ನರ್ ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಸ್ಪಿನ್ನರ್’ಗಳಾಗಿ ಟೀಂ ಇಂಡಿಯಾಗೆ ಶಕ್ತಿ ತುಂಬಲಿದ್ದಾರೆ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.