India vs England: ಅಶ್ವಿನ್ ಹೊಸ ರೆಕಾರ್ಡ್... ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಈ ದಾಖಲೆ ಬರೆದ ಮೊದಲ ಬೌಲರ್!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಪಂದ್ಯದ ಮೊದಲ ದಿನವಾದ ಗುರುವಾರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ಸೃಷ್ಟಿಸಿದರು.
ಭಾರತದ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಒಟ್ಟಾರೆ 150 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಮತ್ತು ಮೂರನೇ ಅಂತಾರಾಷ್ಟ್ರೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ದಿನದ ಮೊದಲಾರ್ಧದಲ್ಲಿ ಅಶ್ವಿನ್ ಎರಡು ವಿಕೆಟ್ ಪಡೆಯುವ ಮೂಲಕ ಈ ರೆಕಾರ್ಡ್ ಕ್ರಿಯೇಟ್ ಮಾಡಿದರು.
12ನೇ ಓವರ್‌ನ ಐದನೇ ಎಸೆತದಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ಬೆನ್ ಡಕೆಟ್ ಅವರನ್ನು ಔಟ್ ಮಾಡುವ ಮೂಲಕ 149ನೇ ವಿಕೆಟ್ ಪಡೆದರು.
16 ನೇ ಓವರ್ ಬೌಲ್ ಮಾಡುವಾಗ ಮೊದಲ ಎಸೆತದಲ್ಲಿ ಅಶ್ವಿನ್ ತಮ್ಮ 150 ನೇ ವಿಕೆಟ್ ಪಡೆದರು.
ಇದರೊಂದಿಗೆ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕ್ರಿಕೆಟ್‌ನ ಇತಿಹಾಸದಲ್ಲಿ 150 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಮತ್ತು ಮೂರನೇ ಅಂತರರಾಷ್ಟ್ರೀಯ ಕ್ರಿಕೆಟಿಗರಾದರು. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮತ್ತು ನಾಥನ್ ಲಿಯಾನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.