Cricketer Marriage: ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರ್ತಿ: ಫೋಟೋಸ್ ವೈರಲ್

Veda Krishnamurthy Marriage: ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ಎಲ್ಲರಿಗೂ ಚಿರಪರಿಚಿತ ಹೆಸರು. ವೇದಾ ಕೃಷ್ಣಮೂರ್ತಿ ಅವರು ತಮ್ಮ ಡ್ಯಾಶಿಂಗ್ ಬ್ಯಾಟಿಂಗ್ ಮತ್ತು ಬೌಲಿಂಗ್‌ನಿಂದ ಪಂದ್ಯಗಳನ್ನು ಗೆಲ್ಲಿಸಿಕೊಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಇದೀಗ ಅವರು ದಿಢೀರ್ ಆಗಿ ಮದುವೆಯಾಗುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. 

1 /6

ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ದಿಢೀರ್ ಆಗಿ ಮದುವೆಯಾಗುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಶೇರ್ ಮಾಡುವ ಮೂಲಕ ವೇದಾ ಕೃಷ್ಣಮೂರ್ತಿ ಮದುವೆ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

2 /6

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಣಜಿ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರು ವೇದಾ ಕೃಷ್ಣಮೂರ್ತಿ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಇದೀಗ ಈ ಇಬ್ಬರೂ ಆಟಗಾರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

3 /6

ಈ ಜೋಡಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ವೇದಾ ಕೃಷ್ಣಮೂರ್ತಿ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಅರ್ಜುನ್ ಹೊಯ್ಸಳ ಅವರೊಂದಿಗೆ ಮದುವೆಯಾಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ ಮಿಸ್ಟರ್ ಆಂಡ್ ಮಿಸಸ್!!! ಇದು ನಿನಗಾಗಿ ಅಮ್ಮಾ. ನಿಮ್ಮ ಜನ್ಮದಿನವು ಯಾವಾಗಲೂ ವಿಶೇಷವಾಗಿರುತ್ತದೆ. ಲವ್ ಯು ಅಕ್ಕಾ ಈಗಷ್ಟೇ ಮದುವೆಯಾಗಿದೆ. 12.01.23” ಎಂದು ಶೀರ್ಷಿಕೆ ನೀಡಿದ್ದಾರೆ.

4 /6

ಅರ್ಜುನ್ ಹೊಯ್ಸಳ ಅವರು ವೇದಾ ಕೃಷ್ಣಮೂರ್ತಿ ಅವರಿಗೆ ಮೊಣಕಾಲೂರಿ ಪ್ರೇಮ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡ ಅರ್ಜುನ್ ಹೊಯ್ಸಳ, :”ಆಕೆ ಒಪ್ಪಿಗೆ ನೀಡಿದಳು” ಎಂದು ಬರೆದುಕೊಂಡಿದ್ದರು. ಮಲೆನಾಡಿನ ಹಚ್ಚ ಹಸಿರಿನ ನಡುವೆ ಅರ್ಜುನ್ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದರು.

5 /6

ಅರ್ಜುನ್ ಹೊಯ್ಸಳ 2016 ರಲ್ಲಿ ಕರ್ನಾಟಕ ಪ್ರಥಮ ದರ್ಜೆ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಅರ್ಜುನ್ ಹೊಯ್ಸಳ ಎಡಗೈ ಆರಂಭಿಕ ಬ್ಯಾಟ್ಸ್‌ಮನ್.

6 /6

ವೇದಾ ಕೃಷ್ಣಮೂರ್ತಿ 2011 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ವೇದಾ ಕೃಷ್ಣಮೂರ್ತಿ ಇದುವರೆಗೆ ಟೀಂ ಇಂಡಿಯಾ ಪರ 48 ಏಕದಿನ ಹಾಗೂ 76 ಟಿ20 ಪಂದ್ಯಗಳನ್ನು ಆಡಿದ್ದಾರೆ.