Tecno Spark 20 Pro 5G: Tecno Spark 20 Pro 5G ಮೊಬೈಲ್ 6.78 ಇಂಚಿನ ಪೂರ್ಣ HD + LCD ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಲಭ್ಯವಿದೆ. ಇದರೊಂದಿಗೆ ಡಿಸ್ಪ್ಲೇ ಬಳಕೆದಾರರಿಗೆ ಮುಂಭಾಗದ ಪ್ಯಾನಲ್ ಪಂಚ್ ಹೋಲ್ ವಿನ್ಯಾಸವನ್ನು ನೀಡುತ್ತದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಶನ್ 6080 ಆಕ್ಟಾ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ.
Tecno Spark 20 Pro 5G launched in India: ಹೆಸರಾಂತ ಸ್ಮಾರ್ಟ್‌ಫೋನ್ ತಯಾರಕ ಕಂಪನಿ ಟೆಕ್ನೋ ಇದೀಗ ಮತ್ತೊಂದು ಹೊಚ್ಚ ಹೊಸ 5G ಸ್ಮಾರ್ಟ್‌ಫೋನ್ ಬಿಡುಗಡೆಗೊಳಿಸಿದೆ. ಭಾರತೀಯ ಮಾರುಕಟ್ಟೆಗೆ Tecno Spark 20 Pro 5G ಬಿಡುಗಡೆಯಾಗಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸ್ಮಾರ್ಟ್‌ಫೋನ್ ಹಲವಾರು ಅದ್ಭುತ ವೈಶಿಷ್ಟ್ಯಗಳನ್ನು ಹೊಂದಿದೆ. ಈ Tecno Spark 20 Pro 5G ಫೋನ್ 108MP ಪ್ರೈಮರಿ ಕ್ಯಾಮೆರಾ ಹೊಂದಿದೆ. ಇದರ ಮೈಕ್ರೋ SD ಕಾರ್ಡ್ ಸಹಾಯದಿಂದ ಫೋನ್‌ನ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
Tecno Spark 20 Pro 5G ಮೊಬೈಲ್ 6.78 ಇಂಚಿನ ಪೂರ್ಣ HD + LCD ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಲಭ್ಯವಿದೆ. ಇದರೊಂದಿಗೆ ಡಿಸ್ಪ್ಲೇ ಬಳಕೆದಾರರಿಗೆ ಮುಂಭಾಗದ ಪ್ಯಾನಲ್ ಪಂಚ್ ಹೋಲ್ ವಿನ್ಯಾಸವನ್ನು ನೀಡುತ್ತದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಶನ್ 6080 ಆಕ್ಟಾ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ 8GB RAM & 256GB ವರೆಗಿನ ಸ್ಟೋರೇಜ್ ಹೊಂದಿದೆ. ಇದಷ್ಟೇ ಅಲ್ಲದೆ ಇಂಟರ್ನಲ್ ಸ್ಟೋರೇಜ್ ವಿಸ್ತರಿಸಲು ಮೈಕ್ರೊ SD ಕಾರ್ಡ್ ಸ್ಲಾಟ್ ಸಹ ನೀಡಲಾಗಿದೆ. ಮೈಕ್ರೋ SD ಕಾರ್ಡ್ ಸಹಾಯದಿಂದ ಫೋನ್‌ನ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ 108MP ಅಲ್ಟ್ರಾ ಸೆನ್ಸಿಂಗ್ ಪ್ರೈಮರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರೊಂದಿಗೆ ಇದು 2MP ಮತ್ತೊಂದು ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ ಬಳಕೆದಾರರನ್ನು ಬೆರಗುಗೊಳಿಸುವ ಸೆಲ್ಫಿಗಳು ಮತ್ತು ವಿಡಿಯೋ ಕರೆಗಾಗಿ 32MP ಮುಂಭಾಗದ ಕ್ಯಾಮೆರಾ ಲೆನ್ಸ್ ಅನ್ನು ಸಹ ಹೊಂದಿದೆ.
ಈ ಸ್ಮಾರ್ಟ್‌ಫೋನ್ 5000mAhನ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದು ಬಳಕೆದಾರರಿಗೆ ದೀರ್ಘ ಬ್ಯಾಟರಿ ಬ್ಯಾಕಪ್ ನೀಡುತ್ತದೆ. ಫೋನ್ ಚಾರ್ಜ್ ಮಾಡಲು 33W ವೇಗದ ಚಾರ್ಜಿಂಗ್ ಬೆಂಬಲವೂ ಇದೆ.
ಭಾರತೀಯ ಮಾರುಕಟ್ಟೆಯಲ್ಲಿ Tecno Spark 20 Pro 5G ಸ್ಮಾರ್ಟ್‌ಫೋನ್ ಮೇಲೆ ಭರ್ಜರಿ ರಿಯಾಯಿತಿ ನೀಡಲಾಗುತ್ತಿದೆ. ಫೋನ್‌ನ ಆರಂಭಿಕ ಬೆಲೆ 15,999 ರೂ.ಗೆ ನಿಗದಿಪಡಿಸಲಾಗಿದೆ. 2,000 ರೂ. ಬ್ಯಾಂಕ್ ರಿಯಾಯಿತಿಯೊಂದಿಗೆ ಇದನ್ನು 13,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಜನಪ್ರಿಯ ಇ-ಕಾಮರ್ಸ್ ವೆಬ್‌ಸೈಟ್ ಅಮೆಜಾನ್‌ನಲ್ಲಿ ಜುಲೈ 11ರಿಂದ ಸ್ಮಾರ್ಟ್‌ಫೋನ್ ಮೊದಲ ಮಾರಾಟವಾಗಲಿದೆ.