Test cricket records: 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರು. 2ನೇ ಟೆಸ್ಟ್‍ನ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದರು.
ನವದೆಹಲಿ: ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಹಲವಾರು ಹೊಸ ದಾಖಲೆಗಳನ್ನು ನಿರ್ಮಿಸಿದರು. 500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ ಕಿಂಗ್ ಕೊಹ್ಲಿ ದಿಗ್ಗಜ ಕ್ರಿಕೆಟಿಗರ ದಾಖಲೆಗಳನ್ನು ಮುರಿದರು. 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರು. 2ನೇ ಟೆಸ್ಟ್‍ನ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 76ನೇ ಶತಕ ಸಿಡಿಸಿ ಸಂಭ್ರಮಿಸಿದರು.
ಇದರ ಜೊತೆಗೆ ಟೆಸ್ಟ್ ಕ್ರಿಕೆಟ್ನ 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ರನ್ ಗಳಿಸಿದ ಟಾಪ್ 5 ಆಟಗಾರರಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕ್ರಿಕೆಟ್ ದಿಗ್ಗಜರಾದ ವೆಸ್ಟ್ ಇಂಡೀಸ್‍ನ ಬ್ರಿಯಾನಾ ಲಾರಾ ಮತ್ತು ಕ್ರಿಕೆಟ್ ದೇವರು ಖ್ಯಾತಿಯ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಂತೆ ಅತಿಹೆಚ್ಚು ರನ್ ಗಳಿಸಿದ ಆಟಗಾರರಾಗಿ ಕೊಹ್ಲಿ ಹೊರಹೊಮ್ಮಿದ್ದಾರೆ. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ರನ್ ಗಳಿಸಿದ ಟಾಪ್ 5 ಆಟಗಾರರ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕ್ರಿಕೆಟ್ ದೇವರು ಖ್ಯಾತಿಯ ಸಚಿನ್ ತೆಂಡೂಲ್ಕರ್ ಅವರು ಟೆಸ್ಟ್ ಕ್ರಿಕೆಟ್ನ 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಅಂದರೆ 13,492 ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರು ಟೆಸ್ಟ್ ಕ್ರಿಕೆಟ್ನ 4ನೇ ಕ್ರಮಾಂಕದಲ್ಲಿ 9,509 ರನ್ ಗಳಿಸಿ 2ನೇ ಸ್ಥಾನದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದ ಮಾಜಿ ಸ್ಟಾರ್ ಆಟಗಾರ ಜಾಕ್ವೆಸ್ ಕಾಲಿಸ್ ಟೆಸ್ಟ್ ಕ್ರಿಕೆಟ್ನ 4ನೇ ಕ್ರಮಾಂಕದಲ್ಲಿ 9,033 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ತಂಡದ ಮಾಜಿ ಕ್ಯಾಪ್ಟನ್ ಬ್ರಿಯಾನ್ ಲಾರಾ ಟೆಸ್ಟ್ ಕ್ರಿಕೆಟ್ನ 4ನೇ ಕ್ರಮಾಂಕದಲ್ಲಿ 7,535 ರನ್ ಗಳಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ 7,097 ರನ್ ಗಳಿಸಿದ್ದಾರೆ.