Test cricket records: 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು

Most centuries at No.4: ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ 25ನೇ ಶತಕ ಬಾರಿಸಿ ಬ್ರಿಯನ್ ಲಾರಾರ(24) ದಾಖಲೆಯನ್ನು ಹಿಂದಿಕ್ಕಿದರು. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್‌ 5 ಕ್ರಿಕೆಟಿಗರ ಮಾಹಿತಿ ಇಲ್ಲಿದೆ ನೋಡಿ.

ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು. 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಕೊಹ್ಲಿ 5 ವರ್ಷಗಳ ಬಳಿಕ ವಿದೇಶಿ ನೆಲದಲ್ಲಿ ಟೆಸ್ಟ್ ಶತಕ ಬಾರಿಸಿದ ಸಾಧನೆ ಮಾಡಿದರು. 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‍ನಲ್ಲಿ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 76ನೇ ಶತಕ ಪೂರೈಸಿದರು.  

ಅಂದಹಾಗೆ ಇದು ಕೊಹ್ಲಿ ಬ್ಯಾಟ್‍ನಿಂದ ಮೂಡಿಬಂದ ವಿಂಡೀಸ್ ವಿರುದ್ಧದ 29ನೇ ಶತಕವಾಗಿದೆ. ಇದಲ್ಲದೆ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬಾರಿಸಿದ 25ನೇ ಶತಕ ಎನಿಸಿಕೊಂಡಿತು. ಈ ಮೂಲಕ ಬ್ರಿಯನ್ ಲಾರಾ(24) ಬಾರಿಸಿದ್ದ ಶತಕದ ದಾಖಲೆಯನ್ನು ಕಿಂಗ್ ಕೊಹ್ಲಿ ಹಿಂದಿಕ್ಕಿದರು. 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಶತಕ ಬಾರಿಸಿದ ಟಾಪ್‌ 5 ಕ್ರಿಕೆಟಿಗರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕ್ರಿಕೆಟ್ ಗಾಡ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 4ನೇ ಕ್ರಮಾಂಕದಲ್ಲಿ ಅತಿಹೆಚ್ಚು ಅಂದರೆ 44 ಶತಕ ಗಳಿಸಿದ ದಾಖಲೆ ಹೊಂದಿದ್ದಾರೆ.

2 /5

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಕ್ ಕಾಲಿಸ್ ಅವರು 4ನೇ ಕ್ರಮಾಂಕದಲ್ಲಿ 35 ಶತಕ ಗಳಿಸಿ 2ನೇ ಸ್ಥಾನದಲ್ಲಿದ್ದಾರೆ.

3 /5

ಶ್ರೀಲಂಕಾ ತಂಡದ ಮಾಜಿ ನಾಯಕ ಮಹೆಲಾ ಜಯವರ್ಧನೆ ಅವರು 4ನೇ ಕ್ರಮಾಂಕದಲ್ಲಿ 30 ಶತಕಗಳನ್ನು ಬಾರಿಸಿದ್ದಾರೆ.

4 /5

500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ 25 ಶತಕ ಬಾರಿಸಿದ್ದು, ಬ್ರಿಯಾನ್ ಲಾರಾರನ್ನು ಹಿಂದಿಕ್ಕಿದ್ದಾರೆ.

5 /5

ವೆಸ್ಟ್ ಇಂಡೀಸ್‍ನ ಮಾಜಿ ನಾಯಕ ಬ್ರಿಯಾನ್ ಲಾರಾ ಅವರು 4ನೇ ಕ್ರಮಾಂಕದಲ್ಲಿ 24 ಶತಕ ಬಾರಿಸಿದ್ದಾರೆ.