ಭಾರತೀಯ ಸೇನೆ ಜೊತೆ ಗುರುತಿಸಿಕೊಂಡ ಕ್ರೀಡಾಪಟುಗಳಿವರು
ಸಚಿನ್ ತೆಂಡೂಲ್ಕರ್ ಅವರು ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ. ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ 2010 ರಲ್ಲಿ ಭಾರತೀಯ ವಾಯುಪಡಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿ ಸೇರ್ಪಡೆಯಾಗಿದ್ದಾರೆ.
ಭಾರತದ ಮೊದಲ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಕೂಡ 2008 ರಲ್ಲಿ ಭಾರತೀಯ ಸೇನೆಗೆ ಸೇರಿದರು. ಅವರು ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ.
ಭಾರತದ ಎರಡನೇ ODI ವಿಶ್ವಕಪ್ ವಿಜೇತ ಮತ್ತು T20 ವಿಶ್ವಕಪ್ ವಿಜೇತ ನಾಯಕ ಎಂಎಸ್ ಧೋನಿ ಕೂಡ 2011 ರಲ್ಲಿ ಸೇನೆಗೆ ಸೇರಿದರು. 2019 ರ ವಿಶ್ವಕಪ್ ನಂತರ ಧೋನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯೊಂದಿಗೆ ಕೆಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ.
2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ವೈಯಕ್ತಿಕ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ ಗೆದ್ದ ಶೂಟರ್ ಅಭಿನವ್ ಬಿಂದ್ರಾ, 2011 ರಲ್ಲಿ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಪದವಿಯನ್ನು ಅಲಂಕರಿಸಿದ್ದಾರೆ.
2004 ರ ಅಥೆನ್ಸ್ ಒಲಿಂಪಿಕ್ಸ್‌ನಲ್ಲಿ ಡಬಲ್ ಟ್ರ್ಯಾಪ್ ಈವೆಂಟ್ ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ರಾಜ್ಯವರ್ಧನ್ ಸಿಂಗ್ ರಾಥೋಡ್, 90 ರ ದಶಕದಲ್ಲಿ ಎನ್‌ಡಿಎಯಿಂದ ಪದವಿ ಪಡೆದರು. ಅಂದಿನಿಂದ 2013ರವರೆಗೆ ಸೇನೆಯಲ್ಲಿದ್ದ ಅವರು ಕರ್ನಲ್ ಹುದ್ದೆಯಿಂದ ನಿವೃತ್ತರಾದ ಬಳಿಕ ರಾಜಕೀಯ ಪ್ರವೇಶಿಸಿದರು.
ಟ್ರ್ಯಾಕ್ ಮತ್ತು ಫೀಲ್ಡ್ ನಲ್ಲಿ ಮೊದಲ ಬಾರಿಗೆ ಭಾರತಕ್ಕೆ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಈಗಾಗಲೇ ಭಾರತೀಯ ಸೇನೆಯಲ್ಲಿದ್ದಾರೆ. ನೀರಜ್ 2016 ರಲ್ಲಿ ಭಾರತೀಯ ಸೇನೆಗೆ ಸೇರಿದ್ದಾರೆ.