ಮಲ್ಲಿಗೆ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸಿದ ಕ್ಷಣ
ಭಾನುವಾರ ರಾತ್ರಿ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವಾಗತಿಸಿದರು.
ಆ ಸಂದರ್ಭದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಡಿ.ವಿ. ಸದಾನಂದ ಗೌಡ ಉಪಸ್ಥಿತರಿದ್ದರು.