Photos: ಮೈಸೂರಿನಿಂದ ದೆಹಲಿಗೆ ಮರಳಿದ ರಾಷ್ಟ್ರಪತಿ: ಸಿಎಂ ಸೇರಿ ಸಚಿವರಿಂದ ಆತ್ಮೀಯ ಬೀಳ್ಕೊಡುಗೆ

Wed, 28 Sep 2022-3:54 pm,

ಮೈಸೂರು ದಸರಾದ ಉದ್ಘಾಟನಾ ಸಮಾರಂಭ ಹಾಗೂ ಹಲವು ಕಾರ್ಯಕ್ರಮಗಳ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ರಾಜ್ಯಕ್ಕೆ ಆಗಮಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನವದೆಹಲಿಗೆ ಹಿಂತಿರುಗಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ವೇಳೆ ಮಾತನಾಡಿದ ಸಚಿವ ನಿರಾಣಿ ಅವರು, ಈ ಬಾರಿಯ ಮೈಸೂರು ದಸರಾವನ್ನು ರಾಷ್ಟ್ರಪತಿಗಳು ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದೆ. ರಾಜ್ಯಕ್ಕೆ ಅವರ ಆಗಮನವೂ ನಮ್ಮೆಲ್ಲರಿಗೂ ಮತ್ತಷ್ಟು ಪ್ರೇರಣೆ ನೀಡಿದಂತಾಗಿದೆ ಎಂದರು.

ಸಾಂಸ್ಕೃತಿಕ ನಗರಿ ಮೈಸೂರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ  ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ಸೆಪ್ಟೆಂಬರ್  26ರಂದು ಬೆಳಗ್ಗೆ 9.45ರಿಂದ‌1 0.05ರ ವೃಶ್ಚಿಕ ಲಗ್ನದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link