Puneeth tableau : ಮೈಸೂರು ಜಂಬೂ ಸವಾರಿಯಲ್ಲಿ ಪುನೀತ್ ಸ್ತಬ್ಧಚಿತ್ರ

Wed, 05 Oct 2022-11:46 am,

ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಗಡಿಜಿಲ್ಲೆ ಚಾಮರಾಜನಗರದಿಂದ ಅಪ್ಪು ಸ್ತಬ್ಧ ಚಿತ್ರವನ್ನು ರೂಪಿಸಲಾಗಿದೆ. 

ಚೆಲುವ ಚಾಮರಾಜನಗರ ರಾಯಭಾರಿ ಹಾಗೂ ಚಾಮರಾಜನಗರದ ತವರಿನ ನಂಟು ಹೊಂದಿದ್ದ‌ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸ್ತಬ್ಧಚಿತ್ರದ ಮೂಲಕ ಗೌರವ ಸಲ್ಲಿಸಲು ಚಾಮರಾಜನಗರ ಜಿ.ಪಂ‌‌ ಮುಂದಾಗಿದೆ.

ಅಭಿಮಾನಿಗಳು ಅಪ್ಪು ತೇರು ಕಾಣಲು ಕಾತರರಾಗಿದ್ದಾರೆ.‌ ಹನೂರಿನ‌ ಕಲಾವಿದ ಮಹಾದೇವ್ ಎಂಬವರೊಟ್ಟಿಗೆ 15 ಜನರ ತಂಡ ಈ ಸ್ತಬ್ಧ ಚಿತ್ರ ತಯಾರಿಸಿದ್ದು "ಪ್ರಕೃತಿ ಮಡಿಲಿನ ಹುಲಿ ಮತ್ತು ಆನೆ ಅರಣ್ಯ ಧಾಮ' ಎಂದು ಸ್ತಬ್ಧ ಚಿತ್ರಕ್ಕೆ ಹೆಸರಿಡಲಾಗಿದೆ

ಜಿಲ್ಲೆಯ ಪ್ರಕೃತಿ, ವನ್ಯಜೀವಿ ಸಂಪತ್ತು, ಪವಾಡ ಪುರುಷ ಮಲೆ ಮಹದೇಶ್ವರ ಸ್ವಾಮಿಯನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಿದೆ. ಸ್ತಬ್ಧಚಿತ್ರದ ಮುಂಭಾಗ ದೊಡ್ಡ ಹುಲಿಯ ಮುಖ ಇದೆ. 

ಹಸಿರು ಆವರಿಸಿರುವ ಬೆಟ್ಟ, ಅಲ್ಲಿ ಆನೆ ಸೇರಿದಂತೆ ಇತರ ಪ್ರಾಣಿಗಳ ಪ್ರತಿಕೃತಿಗಳು. 

ಮಧ್ಯದಲ್ಲಿ ಹುಲಿಯ ಮೇಲೆ ಕುಳಿತಿರುವ ಮಲೆ ಮಹದೇಶ್ವರ ಸ್ವಾಮಿಯ ಪ್ರತಿಕೃತಿ ಹಾಗೂ ಹಿಂಭಾಗದಲ್ಲಿ ಮಂದಸ್ಮಿತ ಪುನೀತ್‌ರಾಜ್‌ಕುಮಾರ್‌ ಅವರ ದೊಡ್ಡ ಪ್ರತಿಕೃತಿ ಅಳವಡಿಸಲಾಗಿದೆ.‌

ZEENEWS TRENDING STORIES

By continuing to use the site, you agree to the use of cookies. You can find out more by Tapping this link