`ಎಲೆಕ್ಟ್ರಾನಿಕ್ ಸಿಟಿ`ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್

Mon, 06 Nov 2023-9:04 pm,

ರಾಜ ಶಿವಶಂಕರ್ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಅವರ ಕಲಾ ನಿರ್ದೇಶನ "ಎಲೆಕ್ಟ್ರಾನಿಕ್ ಸಿಟಿ" ಚಿತ್ರಕ್ಕಿದೆ.

ಚಂದ್ರಶೇಖರ್ ಶ್ರೀವಾಸ್ತವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. 

 ಆರ್ಯನ್ ಹರ್ಷ "ಎಲೆಕ್ಟ್ರಾನಿಕ್ ಸಿಟಿ ಚಿತ್ರದ ನಾಯಕನಾಗಿದ್ದು,  ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ. ರಶ್ಮಿ ಶೆಟ್ಟಿ, ಭವ್ಯ ರುತ್ವಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  

 

"ಎಲೆಕ್ಟ್ರಾನಿಕ್ ಸಿಟಿ" ಈಗಾಗಲೇ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ.  ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನವೆಂಬರ್ 24 ಚಿತ್ರ ಬಿಡುಗಡೆಯಾಗುತ್ತಿದೆ.            

 

ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್  ಹೇಗಿರುತ್ತದೆ? ಎಂಬ ಪ್ರಮುಖ  ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ.

ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ.     

 

ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ.     

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link