ಮಲಬದ್ಧತೆ ಸಮಸ್ಯೆಗೆ ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಸುಲಭ ಪರಿಹಾರ
ಮಲಬದ್ಧತೆ ಸಮಸ್ಯೆ ಇರುವವರಿಗೆ ಆಮ್ಲಾ ಎಂದರೆ ನೆಲ್ಲಿಕಾಯಿ ಸೇವನೆಯಿಂದ ಪರಿಹಾರ ದೊರೆಯುತ್ತದೆ.
ಫೈಬರ್ ಸಮೃದ್ಧವಾಗಿರುವ ಕಪ್ಪು ಒಣದ್ರಾಕ್ಷಿ ಕೂಡ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಯೋಜನಕಾರಿ ಆಗಿದೆ.
ಒಂದು ಚಮಚ ಮೆಂತ್ಯ ಬೀಜಗಳನ್ನು ನೀರಿನಲ್ಲಿ ನೆನೆಸಿ. ಮರುದಿನ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಶೋಧಿಸಿ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಗೆ ಸುಲಭ ಪರಿಹಾರ ದೊರೆಯುತ್ತದೆ.
ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲನ್ನು ಕುಡಿದು ಮಲಗುವುದರಿಂದ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು.
ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ತುಪ್ಪ ಸೇವಿಸುವುದರಿಂದಲೂ ಮಲಬದ್ದತೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ತಪ್ಪದೇ ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.