Health Tips: ಈ 5 ಆಹಾರಗಳು ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿ!
ವಾಲ್‌ನಟ್ಸ್, ಗೋಡಂಬಿ ಫೈಬರ್‌ನಲ್ಲಿ ಸಮೃದ್ಧವಾಗಿದೆ. ಅದೇ ರೀತಿ ಇವುಗಳಲ್ಲಿ ಕಂಡುಬರುವ ಖನಿಜಗಳು ಹೃದಯವನ್ನು ಆರೋಗ್ಯವಾಗಿಡುತ್ತವೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇವು ಸಹಾಯ ಮಾಡುತ್ತವೆ.
ಧಾನ್ಯಗಳು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೌದು ಧಾನ್ಯಗಳು ದೇಹದಿಂದ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುವ ಕರಗುವ ಫೈಬರ್ ಅನ್ನು ಹೊಂದಿರುತ್ತವೆ.
ಬೆಳ್ಳುಳ್ಳಿ ಪ್ರತಿ ಮನೆಯಲ್ಲೂ ಸುಲಭವಾಗಿ ಸಿಗುತ್ತದೆ. ಬೆಳ್ಳುಳ್ಳಿಯನ್ನು ವಿವಿಧ ರೀತಿಯ ಅಡುಗೆಯಲ್ಲಿ ಬಳಲಾಗುತ್ತದೆ. ಆದರೆ ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿದೆಯೇ? ಬೆಳ್ಳುಳ್ಳಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ.
ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಹಸಿರು ತರಕಾರಿಗಳು ಪ್ರಯೋಜನಕಾರಿ. ಇದು ದೇಹದಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಅನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಸೋಯಾಬೀನ್ ಮತ್ತು ಚೀಸ್ ಕೊಲೆಸ್ಟ್ರಾಲ್‌ಗೆ ತುಂಬಾ ಪ್ರಯೋಜನಕಾರಿ. ಇವುಗಳಲ್ಲಿ ಸಾಕಷ್ಟು ಪ್ರೋಟೀನ್ ಕಂಡುಬರುತ್ತದೆ. ಪ್ರತಿದಿನ ಸೋಯಾಬೀನ್ ಸೇವಿಸಿದರೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.