Cricket Facts: ಕ್ರಿಕೆಟ್ ಇತಿಹಾಸದಲ್ಲಿ ಈ 5 ದಾಖಲೆಗಳನ್ನು ಇದುವರೆಗೂ ಯಾರೂ ಮುರಿದಿಲ್ಲ!

Fri, 19 Aug 2022-10:08 am,

ಭಾರತದ ಮಾಜಿ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲಿ ಅತಿ ಹೆಚ್ಚು ಔಟಾದ ದಾಖಲೆಯನ್ನು ಹೊಂದಿದ್ದಾರೆ. ಸುನಿಲ್ ಗವಾಸ್ಕರ್ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲಿ 3 ಬಾರಿ ಔಟಾಗಿದ್ದಾರೆ. ಇದುವರೆಗೂ ಈ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ. ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಸುನಿಲ್ ಗವಾಸ್ಕರ್ ಕೂಡ ಒಬ್ಬರು. 

ಸೌರವ್ ಗಂಗೂಲಿ ಹೆಸರಿನಲ್ಲಿ ನೀವು ಎಂದೂ ಕೇಳಿರದ ದಾಖಲೆಯೂ ಇದೆ. ಸೌರವ್ ಗಂಗೂಲಿ ಕ್ರಿಕೆಟ್ ಇತಿಹಾಸದಲ್ಲಿ ಏಕದಿನದಲ್ಲಿ ಸತತ ನಾಲ್ಕು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ಆಟಗಾರ. ಅವರು 1997 ರಲ್ಲಿ ಪಾಕಿಸ್ತಾನ ವಿರುದ್ಧದ ODI ಸರಣಿಯಲ್ಲಿ ಸತತ 4 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದರು.

ಶಾಹಿದ್ ಅಫ್ರಿದಿ 37 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 6 ಬೌಂಡರಿಗಳನ್ನು ಬಾರಿಸುವ ಮೂಲಕ ಆ ಸಮಯದಲ್ಲಿ ವೇಗದ ಶತಕವನ್ನು ಸಿಡಿಸಿ ವಿಶ್ವದಾಖಲೆ ಮಾಡಿದರು. ಆದ್ರೆ ಅಫ್ರಿದಿ ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ ಬ್ಯಾಟ್ ಬಳಸಿದ್ದರು. ವಾಸ್ತವವಾಗಿ ಅಫ್ರಿದಿ ಬಳಿ ಸರಿಯಾದ ಬ್ಯಾಟ್ ಇರಲಿಲ್ಲ. ಆದ್ದರಿಂದ ಸಚಿನ್ ಅವರ ಬ್ಯಾಟ್ ಅನ್ನು ಆಡಲು ನೀಡಿದರು.

ಇಂಗ್ಲೆಂಡ್ ಬೌಲರ್ ಜಿಮ್ ಲೇಕರ್ ಟೆಸ್ಟ್ ಪಂದ್ಯವೊಂದರಲ್ಲಿ 19 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗೂ ಈ ದಾಖಲೆಯನ್ನು ಮುರಿಯಲು ಯಾವುದೇ ಬೌಲರ್‌ಗೆ ಸಾಧ್ಯವಾಗಿಲ್ಲ. ಇದು ಟೆಸ್ಟ್ ಪಂದ್ಯವೊಂದರಲ್ಲಿ ಮಾಡಿದ ಅತಿದೊಡ್ಡ ಕ್ರಿಕೆಟ್ ದಾಖಲೆಯಾಗಿದೆ. ಜಿಮ್ ಲೇಕರ್ ಈ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್‌ಗಳನ್ನು ಪಡೆದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆದರು.

ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಆದರೆ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಬಲ್ಲ ಏಕೈಕ ಬ್ಯಾಟ್ಸ್‌ಮನ್ ಅವರು ಎಂದು ಕೆಲವೇ ಜನರಿಗೆ ತಿಳಿದಿದೆ. ಗೇಲ್ 2012ರಲ್ಲಿ ಬಾಂಗ್ಲಾದೇಶ ವಿರುದ್ಧ ಈ ಸಾಧನೆ ಮಾಡಿದ್ದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link