Puneeth Rajkumar : ಇಂದು ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರದಾನ ಮಾಡಲಿದ್ದಾರೆ.
Puneeth Rajkumar : ಇಂದು ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರದಾನ ಮಾಡಲಿದ್ದಾರೆ. ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆಯಲಿರುವ ಅಪ್ಪು ಈ ಹಿಂದೆಯೂ ಅನೇಕ ಸರ್ಕಾರಿ ಹಾಗೂ ಖಾಸಗಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಇದೀಗ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನಕ್ಕೆ ಪುನೀತ್ ರಾಜ್‌ಕುಮಾರ್ ಭಾಜನರಾಗಿದ್ದಾರೆ.
ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಮಿಲನ ಹಾಗೂ ಜಾಕಿ ಚಿತ್ರಗಳ ನಟನೆಗಾಗಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಅತಿಹೆಚ್ಚು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದ ಈಗಿನ ತಲೆಮಾರಿನ ನಟ ಪುನೀತ್ ರಾಜ್‌ಕುಮಾರ್ ಆಗಿದ್ದಾರೆ.
ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಮೂವಿ ಅವಾರ್ಡ್ ಅನ್ನು ಅತಿಹೆಚ್ಚು ಬಾರಿ ಗೆದ್ದ ನಟ ಎಂಬ ಖ್ಯಾತಿ ಕೂಡ ಅಪ್ಪು ಅವರದ್ದಾಗಿದೆ. ಒಟ್ಟು ಐದು ಬಾರಿ ಸೈಮಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಪುನೀತ್ ರಾಜ್‌ಕುಮಾರ್ ಮೈಸೂರು ವಿಶ್ವವಿದ್ಯಾನಿಯಲದಿಂದ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
1985ರಲ್ಲಿ ಬಿಡುಗಡೆಯಾದ ಬೆಟ್ಟದ ಹೂವು ಸಿನಿಮಾದಲ್ಲಿನ ನಟನೆಗಾಗಿ ಪುನೀತ್ ರಾಜ್‌ಕುಮಾರ್ ಅವರು ಅತ್ಯುತ್ತಮ ಬಾಲನಟ ಕೆಟಗರಿ ಅಡಿಯಲ್ಲಿ ರಾಷ್ಟ ಪ್ರಶಸ್ತಿ ಪಡೆದರು.