IPL ಇತಿಹಾಸದಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿದ ಟಾಪ್-5 ಭಾರತೀಯ ಬ್ಯಾಟ್ಸ್’ಮನ್’ಗಳು ಇವರು
4 ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಚೆನ್ನೈ ಪರ ಆಡುವ ಧೋನಿ 115 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಈ ಪಟ್ಟಿಯಲ್ಲಿ ನಾಲ್ಕನೇ ಹೆಸರು ಗೌತಮ್ ಗಂಭೀರ್. ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ಗಾಗಿ ಆಡುತ್ತಿದ್ದ 117 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಈ ಪಟ್ಟಿಯಲ್ಲಿ ಭಾರತದ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಯುವರಾಜ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುವಾಗ 119 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಈ ಪಟ್ಟಿಯಲ್ಲಿ ರಾಬಿನ್ ಉತ್ತಪ್ಪ ಎರಡನೇ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾಗ ಉತ್ತಪ್ಪ 120 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಈ ಪಟ್ಟಿಯಲ್ಲಿ ಭಾರತದ ವೇಗದ ಸ್ವಿಂಗ್ ಬೌಲರ್ ಪ್ರವೀಣ್ ಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು 124 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುವಾಗ ಅವರು ಈ ಸಿಕ್ಸರ್ ಬಾರಿಸಿದ್ದರು.