ಹೈ ಬಿಪಿ ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ ಆಹಾರಗಳಿವು
ಹಸಿರು ಸೊಪ್ಪು- ತರಕಾರಿಗಳು ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತವೆ, ಇದು ಸೋಡಿಯಂ ಪರಿಣಾಮವನ್ನು ಕಡಿಮೆ ಮಾಡುವ ಮೂಲಕ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ, ಬಿಪಿ ಸಮಸ್ಯೆ ಇರುವವರು ತಪ್ಪದೇ ನಿಮ್ಮ ಡಯಟ್ ನಲ್ಲಿ ಹಸಿರು ಸೊಪ್ಪು-ತರಕಾರಿಗಳನ್ನು ಸೇವಿಸಿ.
ಬೀನ್ಸ್, ಬೇಳೆಕಾಳುಗಳಲ್ಲಿ ಪ್ರೋಟೀನ್, ಫೈಬರ್ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ರಕ್ತ ಪರಿಚಲನೆಯ ಕಾರ್ಯವನ್ನು ಉತ್ತೇಜಿಸುವ ಮೂಲಕ ಉರಿಯೂತವನ್ನು ಕಡಿಮೆ ಮಾಡಿ ಹೈ ಬಿಪಿಯನ್ನು ನಿಯಂತ್ರಿಸುತ್ತದೆ.
ಬಾದಾಮಿ, ಪಿಸ್ತಾ ಮತ್ತು ವಾಲ್‌ನಟ್‌ಗಳಂತಹ ಒಣ ಹಣ್ಣುಗಳಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್‌ಗಳು ಹೇರಳವಾಗಿ ಕಂಡು ಬರುತ್ತವೆ. ಇವೂ ಕೂಡ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ಧಾನ್ಯಗಳು, ವಿಶೇಷವಾಗಿ ರೋಲ್ಡ್ ಓಟ್ಸ್, ಬೀಟಾ-ಗ್ಲುಕನ್ ಎಂಬ ಫೈಬರ್ ಸಮೃದ್ಧ ಧಾನ್ಯಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ ಆಗಿವೆ.
ಒಟ್ಟಾರೆಯಾಗಿ ಸಮತೋಲಿತ, ಆರೋಗ್ಯಕರ ಆಹಾರ ಸೇವನೆಯಿಂದ ರಕ್ತದೊತ್ತಡ ಸಮಸ್ಯೆಯಿಂದ ಸುಲಭವಾಗಿ ಪ್ರಯೋಜನ ಪಡೆಯಬಹುದಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.